×
Ad

ಆಸ್ಪತ್ರೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಕೊರೋನ ಸೋಂಕಿತ ವ್ಯಕ್ತಿ ಸಾವು

Update: 2020-08-18 21:25 IST

ಕೊಪ್ಪಳ, ಆ.18: ಆಸ್ಪತ್ರೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಕೊರೋನ ಸೋಂಕಿತ ವ್ಯಕ್ತಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ.

ಗಂಗಾವತಿ ಉಪವಿಭಾಗ ಆಸ್ಪತ್ರೆಯಲ್ಲಿ ಕೊರೋನ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ 40 ವರ್ಷದ ವ್ಯಕ್ತಿ ಆಸ್ಪತ್ರೆ ಹಿಂದಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ.

ಸೋಂಕಿತ ವ್ಯಕ್ತಿ ಬಿದ್ದಿದ್ದನ್ನು ಗಮನಿಸಿದ ಸ್ಥಳೀಯರು ವೈದ್ಯರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಉಪವಿಭಾಗ ಆಸ್ಪತ್ರೆ ಸಿಬ್ಬಂದಿ ಶವ ತಗೆದುಕೊಂಡು ಹೋಗಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿ ಶವ ಬಿದ್ದ ಸ್ಥಳದಲ್ಲಿ ಸ್ಯಾನಿಟೈಸ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News