×
Ad

ಕೊರೋನ ಸೆಂಟರ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿ ಸಾವು

Update: 2020-08-18 22:56 IST

ಬಳ್ಳಾರಿ, ಆ.18: ಹೊಸಪೇಟೆ ನಗರದ ಕೊರೋನ ಕೇರ್ ಸೆಂಟರ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಮುದಾಯ ಆರೋಗ್ಯ ಅಧಿಕಾರಿ ಜಯಪ್ಪ(32) ಅವರು ಮಂಗಳವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕೂಡ್ಲಿಗಿ ತಾಲೂಕಿನ ಬಡೇಲಡಕು ಗ್ರಾಮದ ಜಯಪ್ಪ ಅವರು ಕೊರೋನ ಕೇರ್ ಸೆಂಟರ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಹೃದಯಾಘಾತವಾಗಿದ್ದು, ತಕ್ಷಣವೇ ಅವರನ್ನು ನಗರದ ನೂರು ಹಾಸಿಗೆ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಿಸದೇ ಮಂಗಳವಾರ ಮೃತಪಟ್ಟಿದ್ದಾರೆ.

ಕೇಂದ್ರ ಸರಕಾರದ ರಾಷ್ಟ್ರೀಯ ಆರೋಗ್ಯ ಮಿಶನ್ ಯೋಜನೆಯಡಿ ಹೊರಗುತ್ತಿಗೆ ನೌಕರರಾಗಿ ಜಯಪ್ಪ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಯಾವುದೇ ಉದ್ಯೋಗ ಭದ್ರತೆ ಇರಲಿಲ್ಲ. ಸರಕಾರ ಅವರ ಕುಟುಂಬಕ್ಕೆ 50 ಲಕ್ಷ ಪರಿಹಾರ ಕೊಡಬೇಕು. ಜತೆಗೆ ಕೊರೋನ ಸಂಕಷ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಆರೋಗ್ಯ ಅಧಿಕಾರಿಗಳಿಗೆ ಸೇವಾ ಭದ್ರತೆ ಕಲ್ಪಿಸಿ ಕನಿಷ್ಠ 1 ಕೋಟಿ ವಿಮೆ ಜಾರಿಗೆ ತರಬೇಕು ಎಂದು ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಅಧಿಕಾರಿಗಳ ಸಂಘದ ಅಧ್ಯಕ್ಷ ಬೀರೇಂದ್ರ ಕೇಶವ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News