ಸೇವಾ ಕಾರ್ಯದಲ್ಲಿ ಪ್ರೀತಿ ಇರಬೇಕು, ದ್ವೇಷವಲ್ಲ: ಡಾ.ಕೆ.ಸುಧಾಕರ್

Update: 2020-08-19 11:16 GMT

ಬೆಂಗಳೂರು, ಆ.19: ಎಪಿಜೆ ಅಬ್ದುಲ್ ಕಲಾಂ, ರಾಮ್‍ನಾಥ್ ಕೋವಿಂದ್ ಅವರನ್ನು ರಾಷ್ಟ್ರಪತಿ ಸ್ಥಾನ ಕೊಟ್ಟು ಬಿಜೆಪಿ ಗೌರವಿಸಿತು. ಕಾಂಗ್ರೆಸ್, ಕಾಪೆರ್Çರೇಟರ್‍ಗಳ ಕುಮ್ಮಕ್ಕಿನಿಂದ ದಲಿತ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಸುಟ್ಟು ಪಾಪದ ಕೆಲಸ ಮಾಡಿತು. ಯಾವುದು ಸ್ವಾರ್ಥವೋ ಅದೇ ಪಾಪ. ಯಾವುದು ನಿಸ್ವಾರ್ಥವೋ ಅದೇ ಪುಣ್ಯ. ಸೇವಾ ಕಾರ್ಯದಲ್ಲಿ ಪ್ರೀತಿ ಇರಬೇಕು. ದ್ವೇಷವಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಇಡೀ ರಾಜ್ಯದಲ್ಲೇ ನಂ.1 ಸ್ಥಾನ ಪಡೆದಿದೆ. ಈ ವರ್ಷದಲ್ಲಿ 33.5 ಲಕ್ಷಕ್ಕೂ ಹೆಚ್ಚು ಮಾನವ ದಿನಗಳನ್ನು ಸೃಷ್ಟಿಸಲಾಗಿದ್ದು, ರೇಷ್ಮೆ ಮತ್ತು ತೋಟಗಾರಿಕೆಗೆ ಒತ್ತು ನೀಡಲಾಗಿದೆ. ಯೋಜನೆಯ ಅನುಷ್ಠಾನಕ್ಕೆ ದಕ್ಷತೆಯಿಂದ ಕಾರ್ಯನಿರ್ವಹಿಸಿದ ಜಿಲ್ಲಾಡಳಿತಕ್ಕೆ ಅಭಿನಂದನೆಗಳು ಎಂದು ಅವರು ಹೇಳಿದ್ದಾರೆ.

ಕೋವಿಡ್ ಬಿಕ್ಕಟ್ಟಿನ ನಡುವೆ ಎಲ್ಲ ಮುನ್ನೆಚ್ಚರಿಕೆಗಳೊಂದಿಗೆ ಹಬ್ಬ-ಹರಿದಿನಗಳನ್ನು ಆಚರಿಸುವ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಈ ಬಾರಿಯ ಗಣೇಶ ಹಬ್ಬ ಆಚರಣೆಗೆ ಸರಕಾರ ಕೆಲ ಮಾರ್ಗಸೂಚಿಗಳನ್ನು ರೂಪಿಸಿದೆ. ಸರಕಾರದ ನಿಯಮಗಳನ್ನು ಪಾಲಿಸಿ ಸೋಂಕು ಹರಡದಂತೆ ಜಾಗ್ರತೆ ವಹಿಸಿ ಗೌರಿ-ಗಣೇಶ ಹಬ್ಬ ಆಚರಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಸುಧಾಕರ್ ತಿಳಿಸಿದ್ದಾರೆ.

ಕೋವಿಡ್ ಪರೀಕ್ಷೆಗೆ ಒಳಪಟ್ಟಿರುವ ಸಾರ್ವಜನಿಕರು ಈಗ ತಮ್ಮSRF ID ಬಳಸಿ ಆನ್‍ಲೈನ್ ಮೂಲಕ ಟೆಸ್ಟ್ ವರದಿ ಬಗ್ಗೆ ಮಾಹಿತಿ ಪಡೆಯಬಹುದು ಎಂದು ಸುಧಾಕರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News