×
Ad

ಸಂಸದ ಕರಡಿ ಸಂಗಣ್ಣರಿಗೆ ಕೊರೋನ ಸೋಂಕು ದೃಢ

Update: 2020-08-19 20:58 IST

ಕೊಪ್ಪಳ, ಆ.19: ಸಂಸದ ಕರಡಿ ಸಂಗಣ್ಣ ಅವರಿಗೆ ಕೊರೋನ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ಟಿಟ್ ಮಾಡಿರುವ ಸಂಸದ ಕರಡಿ ಸಂಗಣ್ಣ ಅವರು, ನನ್ನ ಕೊರೋನ ಪರೀಕ್ಷಾ ವರದಿ ಪಾಸಿಟಿವ್ ಬಂದಿದ್ದು, ವೈದ್ಯರ ಸಲಹೆಯಂತೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಭೇಟಿಯಾದ ಕಾರ್ಯಕರ್ತರು ಹಾಗೂ ಮುಖಂಡರು ಯಾರಿಗಾದರೂ ಕೊರೋನ ಲಕ್ಷಣಗಳು ಕಂಡು ಬಂದರೆ ತಕ್ಷಣವೇ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಶಾಸಕರಾದ ಪರಣ್ಣ ಮುನವಳ್ಳಿ, ರಾಘವೇಂದ್ರ ಹಿಟ್ನಾಳ್, ಹಾಲಪ್ಪ ಆಚಾರ್ ಅವರಿಗೂ ಕೊರೋನ ಸೋಂಕು ದೃಢಪಟ್ಟಿತ್ತು. ಎಲ್ಲರೂ ಐಸೋಲೇಶನ್‍ನಲ್ಲಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News