×
Ad

ಪ್ರಶಾಂತ್ ಭೂಷಣ್ ವಿರುದ್ಧದ ನ್ಯಾಯಾಂಗ ನಿಂದನೆ ತೀರ್ಪು ಮರುಪರಿಶೀಲಿಸಿ: ಎಸ್.ಆರ್.ಹಿರೇಮಠ

Update: 2020-08-19 21:46 IST

ಹುಬ್ಬಳ್ಳಿ, ಆ.19: ಹಿರಿಯ ನ್ಯಾಯವಾದಿ, ಹೋರಾಟಗಾರ ಪ್ರಶಾಂತ್ ಭೂಷಣ್ ಅವರ ವಿರುದ್ಧ ನೀಡಿರುವ ನ್ಯಾಯಾಂಗ ನಿಂದನೆ ಪ್ರಕರಣದ ತೀರ್ಪುನ್ನು ನ್ಯಾಯಾಲಯ ಮರು ಪರಿಶೀಲಿಸಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಹೇಳಿದ್ದಾರೆ.

ಬುಧವಾರ ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೂಷಣ್ ಅವರನ್ನು ಬೆಂಬಲಿಸಿ ಅ.22ರಂದು ಅಮೆರಿಕ, ಕೆನಡಾ ದೇಶಗಳಲ್ಲಿ ಉಪವಾಸ ಸತ್ಯಾಗ್ರಹ ಮಾಡಲಾಗುತ್ತಿದೆ ಎಂದು ತಿಳಿಸಿದರು. 

ಜತೆಗೆ ಧಾರವಾಡ, ಹಾವೇರಿಯಲ್ಲಿಯೂ ಹೋರಾಟ ನಡೆಯಲಿದ್ದು, ನ್ಯಾಯಾಂಗ ಹಾಗೂ ಸತ್ಯದ ಪರಿಕಲ್ಪನೆಯನ್ನು ಎತ್ತಿ ಹಿಡಿಯಲು ನಾವೆಲ್ಲರೂ ಬೆಂಬಲಿಸಬೇಕಾಗಿದೆ ಎಂದು ಹೇಳಿದರು. 

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನರ ಧ್ವನಿ ಹಾಗೂ ಸಾರ್ವಜನಿಕ ಸೇವಕ ಎಂದು ಹೇಳಿಕೊಳ್ಳುತ್ತಾರೆ. ಸಂಘ ಪರಿವಾರದವರು ದೇಶದ ಪ್ರಜಾಪ್ರಭುತ್ವ, ಸಂವಿಧಾನಕ್ಕೆ ಕೊಡಲಿ ಪೆಟ್ಟು ನೀಡುತ್ತಿದ್ದಾರೆ. ಮೋದಿ ಈ ಬಗ್ಗೆ ಮೌನವಾಗಿದ್ದಾರೆ ಎಂದು ಕಿಡಿಕಾರಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News