ವೆಂಕಟಸ್ವಾಮಿ
ಕೋಲಾರ: ಜಿಲ್ಲೆಯ ಬಂಗಾರಪೇಟೆ ಹಾಗೂ ಮುಳಬಾಗಿಲು ತಾಲೂಕಿನಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಸಹೃದಯಿ ಸರಳ ಸಜ್ಜನಿಕೆಯ ಅಧಿಕಾರಿ ನಿವೃತ್ತ ಇ. ಒ. ವೆಂಕಟಸ್ವಾಮಿ ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬುಧವಾರ ಸಂಜೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿ ಇರುವ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಆಸ್ಪತ್ರೆಯಲ್ಲಿ ತೀವ್ರ ಸ್ವರೂಪದ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.
ಕೋಲಾರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಪದವಿ ಪಡೆದ ನಂತರ ಬೆಂಗಳೂರಿನಲ್ಲಿ ಎ.ಜಿ.ಬಿ.ಎಸ್ಸಿ. ಮುಗಿಸಿ ಸರ್ಕಾರಿ ಸೇವೆಗೆ ಸೇರಿದರು. ಆನಂತರ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾಗಿ ಸೇವೆ ಸಲ್ಲಿಸಿದ ಇವರು ಕೋಲಾರ ಜಿಲ್ಲೆಯ ಮುಳಬಾಗಿಲು ಹಾಗೂ ಬಂಗಾರಪೇಟೆ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಆಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದರು.
ಇವರು ಪತ್ನಿ ಆಧಿಲಕ್ಷ್ಮಿ, ಇಬ್ಬರು ಪುತ್ರರು ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಇವರ ಅಂತ್ಯಸಂಸ್ಕಾರ ಕೋಲಾರದ ಗಾಂಧಿನಗರದಲ್ಲಿ ಇರುವ ತಮ್ಮ ತೋಟದಲ್ಲಿ ಅಂತಿಮ ವಿಧಿವಿಧಾನಗಳು ನೆರವೇರಲಿದೆ.