×
Ad

ಟಿ.ಆರ್.ಎಫ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Update: 2020-08-19 22:56 IST

ಮಂಗಳೂರು: ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ವತಿಯಿಂದ 2019-20ನೇ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕ ಪಡೆದ ಬ್ಯಾರಿ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಅಭಿನಂದಿಸಲಾಗುವುದು.

ಎಸ್‍ಎಸ್‍ಎಲ್‍ಸಿ ಯಲ್ಲಿ ಗರಿಷ್ಠ ಅಂಕ ಪಡೆದ ಐವರಿಗೆ ಹಾಗೂ ಪಿಯುಸಿ ಪ್ರತೀ ವಿಭಾಗದಲ್ಲಿ ಇಬ್ಬರಂತೆ ಆರು ಮಂದಿಗೆ ನಗದು ಪುರಸ್ಕಾರ ದೊಂದಿಗೆ ಪ್ರಶಸ್ತಿಯನ್ನು ನೀಡಲಾಗುವುದು. ಕನಿಷ್ಠ ಎಸ್‍ಎಸ್‍ಎಲ್‍ಸಿ 95% ಹಾಗೂ ಪಿಯುಸಿಯಲ್ಲಿ 90% ಅಂಕ ಪಡೆದ ವಿದ್ಯಾರ್ಥಿಗಳು ಪ್ರಶಸ್ತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿಯೊಂದಿಗೆ ದೃಢೀಕೃತ ಅಂಕಪಟ್ಟಿಯನ್ನು ಲಗತ್ತಿಸಿ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್, ವಿಶ್ವಾಸ್ ಕ್ರೌನ್, ಕಂಕನಾಡಿ ಮಂಗಳೂರು-2  ಇಲ್ಲಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ 24.08.2020 ಸೋಮವಾರ ದೊಳಗೆ ಸಲ್ಲಿಸಬಹುದು.

ಪ್ರಶಸ್ತಿಗೆ ಬಂದ ಅರ್ಜಿಗಳಲ್ಲಿ ಮಾತ್ರ ಅತ್ಯಧಿಕ ಅಂಕ ಪಡೆದವರನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದು. ಸದರಿ ಪ್ರಶಸ್ತಿಗೆ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತೆ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್, ಇದರ ಅಧ್ಯಕ್ಷ ರಿಯಾಝ್ ಕಣ್ಣೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ-0824-4267883, 9844773906

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News