ಮಾತೃಭಾಷೆಯಲ್ಲಿ ಶಿಕ್ಷಣ ಜಾರಿಯಾಗಲಿ: ಎಲ್.ಹನುಮಂತಯ್ಯ

Update: 2020-08-19 18:19 GMT

ಬೆಂಗಳೂರು, ಆ.19: ರಾಜ್ಯದಲ್ಲಿ ಮಾತೃಭಾಷೆಯ ಮೂಲಕವೇ ಶಿಕ್ಷಣ ಜಾರಿಯಾದರೆ ಕನ್ನಡ ಚಳವಳಿಗಳ ಬಹುವರ್ಷಗಳ ಹೋರಾಟಕ್ಕೆ ನ್ಯಾಯ ದೊರಕಿದಂತಾಗುತ್ತದೆ. ಆ ನಿಟ್ಟಿನಲ್ಲಿ ಕೇಂದ್ರ ಸರಕಾರ ಸೂಕ್ತ ಕಾನೂನು ರೂಪಿಸಬೇಕೆಂದು ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ ಒತ್ತಾಯಿಸಿದ್ದಾರೆ.

ನಗರದಲ್ಲಿ ಆಯೋಜಿಸಿದ್ದ ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ ಅಧ್ಯಕ್ಷ ಎಂ.ತಿಮ್ಮಯ್ಯ ಸಂಪಾದಿಸಿರುವ ಕನ್ನಡ ಸೌರಭ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಹಲವು ಮಂದಿ ಹೋರಾಟಗಾರರು ಮಾತೃಭಾಷಾ ಶಿಕ್ಷಣಕ್ಕಾಗಿ ತಮ್ಮ ಬದುಕನ್ನು ಸವೆಸಿದ್ದಾರೆ. ಹೀಗಾಗಿ ಮಾತೃಭಾಷೆಯಲ್ಲಿ ಶಿಕ್ಷಣ ಜಾರಿಯಾದರೆ ಅವರೆಲ್ಲರ ಮನಸ್ಸಿಗೆ ನೆಮ್ಮಂದಿ ಸಿಕ್ಕಿದಂತಾಗುತ್ತದೆ ಎಂದರು.

ನಮ್ಮ ಶಿಕ್ಷಣ, ಬದುಕು ಎಂದೆಂದಿಗೂ ಕನ್ನಡವೇ ಆಗಿರಬೇಕು. ರಾಜ್ಯದಲ್ಲಿ ಬ್ಯಾಂಕ್, ನ್ಯಾಯಾಲಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಕನ್ನಡವೇ ಪ್ರಧಾನ ಆಗಿರಬೇಕು. ಈ ನಿಟ್ಟಿನಲ್ಲಿ ಸರಕಾರ ಸೂಕ್ತ ಕಾನೂನುಗಳನ್ನು ರೂಪಿಸಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಹಿರಿಯ ವಿದ್ವಾಂಸರಾದ ಪ್ರೊ.ಜಿ.ಅಶ್ವತ್ಥ ನಾರಾಯಣ, ಮಾಜಿ ವಿಧಾನ ಪರಿಷತ್ ಸದಸ್ಯ ಅಶ್ವತ್ಥ ನಾರಾಯಣ ಮತ್ತು ಕೃತಿಯ ಸಂಪಾದಕ ಎಂ.ತಿಮ್ಮಯ್ಯ ಭಾಗವಹಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News