ಕರ್ನಾಟಕ ಸಾಹಿತ್ಯ ಅಕಾಡೆಮಿ: 2019ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ

Update: 2020-08-20 12:07 GMT

ಬೆಂಗಳೂರು, ಆ.20: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2019ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ವಿವಿಧ ಪ್ರಕಾರದ ಕೃತಿಗಳನ್ನು ಆಹ್ವಾನಿಸಿದೆ. ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುತ್ತದೆ.

ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2019ರ ಜನವರಿ 1ರಿಂದ ಡಿಸೆಂಬರ್ 31ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2019 ಎಂದು ಮುದ್ರಿತವಾಗಿರಬೇಕು. ತಲಾ 4 ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆಸಿ ರಸ್ತೆ, ಬೆಂ.02 ಇಲ್ಲಿಗೆ ರಿಜಿಸ್ಟರ್ಡ್ ಅಂಚೆ, ಕೊರಿಯಾರ್ ಅಥವಾ ಖುದ್ದಾಗಿ ಸೆ.30ರೊಳಗೆ ತಲುಪಿಸಬೇಕು.

ಪ್ರಶಸ್ತಿಗೆ ಕಳುಹಿಸಬೇಕಾದ ಪ್ರಕಾರಗಳು: ಕಾವ್ಯ, ನವಕವಿಗಳ ಪ್ರಥಮ ಕವನ ಸಂಕಲನ, ಕಾದಂಬರಿ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ, ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ, ಸಂಶೋಧನೆ, ವೈಚಾರಿಕ ಪ್ರಕಾರದ ಕೃತಿಗಳು ಹಾಗೂ 30ವರ್ಷ ಒಳಗಿರುವ ಯುವ ಕವಿಗಳು ಮತ್ತು ತಮ್ಮ ಅಪ್ರಕಟಿತ ಪ್ರಥಮ ಕವನ ಸಂಕಲನದ ಹಸ್ತಪ್ರತಿಯನ್ನು ಕಳುಹಿಸಿಕೊಡಬಹುದು ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News