×
Ad

ಉಡುಪಿ: ಆ.24ಕ್ಕೆ ಅಂಗವಿಕಲರಿಗೆ ಸಾಧನ ಸಲಕರಣೆ ವಿತರಣಾ ಶಿಬಿರ

Update: 2020-08-20 18:30 IST

ಉಡುಪಿ, ಆ.20: ಎಂಆರ್‌ಪಿಎಲ್‌ನ ಸಿಎಸ್‌ಆರ್ ನಿಧಿಯ ಧನಸಹಾಯ ದಿಂದ ಬೆಂಗಳೂರಿನ ಅಲಿಮ್ಕೋ ಎಸಿಸಿ ಮೂಲಕ ಉಡುಪಿ ಜಿಲ್ಲಾಡಳಿತ, ಉಡುಪಿ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ, ಅಂಗವಿಕಲರ ಪುನರ್ವಸತಿ ಕೇಂದ್ರ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಗಳ ಸಹಯೋಗದೊಂದಿಗೆ ಉಡುಪಿ ಜಿಲ್ಲಾ ವ್ಯಾಪ್ತಿಯ ಅಂಗವಿಕಲರಿಗೆ ದೈನಂದಿನ ಚಟುವಟಿಕೆಗಳಿಗೆ ಪೂರಕವಾದ ಸಾಧನ ಸಲಕರಣೆ ವಿತರಿಸಲು ಶಿಬಿರವನ್ನು ಆಗಸ್ಟ್ 24ರಿಂದ ಆಯೋಜಿಸಿದೆ.

ಉಡುಪಿ ತಾಲೂಕು ವ್ಯಾಪ್ತಿಯ ಅಂಗವಿಕಲರಿಗೆ ಅಜ್ಜರಕಾಡಿನ ವಿವೇಕಾನಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.24ರಂದು, ಬ್ರಹ್ಮಾವರ ತಾಲೂಕು ವ್ಯಾಪ್ತಿಯಅಂಗವಿಕಲರಿಗೆ ಆ.25ರಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬ್ರಹ್ಮಾವರ, ಬೈಂದೂರು ತಾಲೂಕು ವ್ಯಾಪ್ತಿಯ ಅಂಗವಿಕಲರಿಗೆ ಆ.26 ರಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೈಂದೂರು ಇಲ್ಲಿ ವಿತರಿಸಲಾಗುವುದು.

ಕುಂದಾಪುರ ತಾಲೂಕು ವ್ಯಾಪ್ತಿಯ ಅಂಗವಿಕಲರಿಗೆ ಆ.27ರಂದು ತಾಲೂಕು ಪಂಚಾಯತ್ ಸಭಾಂಗಣ ಕುಂದಾಪುರ, ಕಾರ್ಕಳ ತಾಲೂಕು ವ್ಯಾಪ್ತಿಯ ಅಂಗವಿಕಲರಿಗೆ ಆ.28ರಂದು ತಾಲೂಕು ಪಂಚಾಯತ್ ಸಭಾಂಗಣ ಕಾರ್ಕಳ ಹಾಗೂ ಕಾಪು ತಾಲೂಕು ವ್ಯಾಪ್ತಿಯ ಅಂಗಕಲರಿಗೆ ಆ.29ರಂದು ಜೆ.ಸಿ. ಭವನ ಕಾಪು ಇಲ್ಲಿ ಶಿಬಿರಗಳನ್ನು ಆಯೋಜಿಸಲಾಗಿದೆ.

ಅಂಗವಿಕಲರಿಗೆ ಉಚಿತವಾಗಿ ಶ್ರವಣ ಸಾಧನ, ಕೃತಕ ಕಾಲು, ಕ್ಯಾಲಿಪರ್, ಮೊಣಕೈ ಊರುಗೋಲು, ಕಂಕುಳ ದೊಣ್ಣೆ, ರೋಲೆಟರ್, ಊರುಗೋಲು, ಗಾಲಿ ಕುರ್ಚಿ, ಸಿ.ಪಿ.ಗಾಲಿ ಕುರ್ಚಿ, ತ್ರಿಚಕ್ರ ಸೈಕಲ್, ಬ್ರೈಲ್ ಕಿಟ್, ಸ್ಮಾರ್ಟ್ ಕೇನ್, ಸೆಲ್ ಫೋನ್, ಸ್ಮಾರ್ಟ್ ಫೆನ್‌ಗಳನ್ನು ವಿತರಿಸಲಾಗುವುದು.

ಹೆಚ್ಚಿನ ಮಾಹಿತಿಗಳಿಗಾಗಿ ಉಡುಪಿ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ ದೂರವಾಣಿ ಸಂಖ್ಯೆ:0820-2574810/811ನ್ನು ಸಂಪರ್ಕಿಸುವಂತೆ ಉಡುಪಿ ಜಿಲ್ಲಾ ಅಂಗಕಲರ ಕಲ್ಯಾಣಾಧಿಕಾರಿ ಚಂದ್ರ ನಾಯ್ಕಾ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News