×
Ad

ಉಡುಪಿ: ಸರಕಾರಗಳ ಜನವಿರೋಧಿ ನೀತಿ ವಿರೋಧಿಸಿ ‘ಜನಧ್ವನಿ’ ಪ್ರತಿಭಟನೆ

Update: 2020-08-20 18:33 IST

ಉಡುಪಿ, ಆ.20: ಕೇಂದ್ರ ಹಾಗೂ ರಾಜ್ಯ ಸರಕಾರದ ಜನವಿರೋಧಿ ನೀತಿ ಗಳಾದ ಎಪಿಎಂಸಿ, ಕಾರ್ಮಿಕ ಹಾಗೂ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆ ಹಾಗೂ ಕೊರೊನಾ ಉಪಕರಣಗಳ ಖರೀದಿಯಲ್ಲಿ ನಡೆದ ಭ್ರಷ್ಟಾ ಚಾರಗಳ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ‘ಜನಧ್ವನಿ’ ಪ್ರತಿಭಟನಾ ಕಾರ್ಯಕ್ರಮವನ್ನು ಗುರುವಾರ ಉಡುಪಿ ತಾಲೂಕು ಕಚೇರಿ ಎದುರು ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಕಾಂಗ್ರೆಸ್ ಭವನದಿಂದ ತಾಲೂಕು ಕಚೇರಿಯವರೆಗೆ ಮೆರವಣಿಗೆಯ ಮೂಲಕ ತೆರಳಿದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು, ಪ್ರತಿಭಟನೆಯ ಬಳಿಕ ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕರ್ನಾಟಕದ ಬಿಜೆಪಿ ಸರಕಾರ ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಸುಗ್ರಿವಾಜ್ಞೇ ಮೂಲಕ ಜಾರಿಗೆಗೊಳಿಸಿದೆ. ಇಡೀ ಮನುಕುಲವನ್ನೇ ಆತಂಕಕ್ಕೀಡು ಮಾಡಿರುವ ಕೊರೋನ ನಿಯಂತ್ರಣ ಕಾರ್ಯಕ್ರಮದಲ್ಲೂ ವ್ಯಾಪಕವಾದ ಭ್ರಷ್ಟಾಚಾರ ನಡೆಸಿದೆ. ಅಲ್ಲದೆ ರಾಜ್ಯದ ಬಹುಭಾಗವನ್ನು ಭಾಧಿಸುತ್ತಿರುವ ಅತಿವೃಷ್ಟಿಗೆ ಪರಿಹಾರ ಒದಗಿಸುವಲ್ಲಿ ಕೂಡ ಸಂಪೂರ್ಣ ವಾಗಿ ವಿಫಲವಾಗಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡ ವೂರು, ಮಾಜಿ ಶಾಸಕ ಯು.ಆರ್.ಸಭಾಪತಿ, ಕೆಪಿಸಿಸಿ ಕಾರ್ಯದರ್ಶಿ ಎಂ.ಎ. ಗಫೂರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ನಗರಸಭಾ ಸದಸ್ಯ ರಮೇಶ್ ಕಾಂಚನ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹರೀಶ್ ಕಿಣಿ, ಮುಖಂಡರಾದ ಇಸ್ಮಾಯಿಲ್ ಆತ್ರಾಡಿ, ಹಬೀಬ್ ಅಲಿ, ವೆರೋನಿಕಾ ಕರ್ನೆಲಿಯೋ, ಯತೀಶ್ ಕರ್ಕೆರಾ, ಜನಾದರ್ನ ಭಂಡಾರ್ಕರ್, ಡಾ.ಸುನೀತಾ ಶೆಟ್ಟಿ, ರೋಶನಿ ಒಲಿವರ್, ಪ್ರಶಾಂತ್ ಪೂಜಾರಿ, ಭಾಸ್ಕರ್ ರಾವ್ ಕಿದಿಯೂರು, ನರಸಿಂಹ ಮೂರ್ತಿ, ಪ್ರಶಾಂತ್ ಜತ್ತನ್ನ ಮೊದಲಾದ ವರು ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News