×
Ad

ಬಂಟಕಲ್ಲು: ಕೊಂಕಣಿ ಮಾನ್ಯತಾ ದಿವಸ್ ಆಚರಣೆ

Update: 2020-08-20 21:48 IST

ಶಿರ್ವ, ಆ.20: ಬಂಟಕಲ್ಲು ರಾಜಾಪುರ ಸಾರಸ್ವತ ಯುವ ವೃಂದದ ವತಿಯಿಂದ ಕೊಂಕಣಿ ಮಾನ್ಯತಾ ದಿವಸ್ ಕಾರ್ಯಕ್ರಮವನ್ನು ಶ್ರೀದೇವಳದ ವಠಾರದಲ್ಲಿ ಗುರುವಾರ ಏರ್ಪಡಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಉದ್ಯಮಿ ಕಟಪಾಡಿ ಸತ್ಯೇಂದ್ರ ಪೈ ಮಾತನಾಡಿ, ಕೊಂಕಣಿ ಭಾಷೆ, ಸಾಹಿತ್ಯ, ಜಾನಪದಕ್ಕೆ 2000ಕ್ಕೂ ಅಧಿಕ ವರ್ಷ ಗಳ ಇತಿಹಾಸವಿದ್ದು, ಈ ಪುರಾತನ ಇತಿಹಾಸವನ್ನು ಮುಂದಿನ ಪೀಳಿಗೆಯಲ್ಲಿ ಪರಿಣಾಮಕಾರಿಯಾಗಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಚಲನಚಿತ್ರ ಮಾಧ್ಯಮದ ಅಗತ್ಯ ಇದೆ ಎಂದರು.

ಮಂಗಳೂರು ವಿವಿ ಕೊಂಕಣಿ ಅಧ್ಯಯನಪೀಠದ ಸದಸ್ಯ ಬಿ.ಪುಂಡಲೀಕ ಮರಾಠೆ ಕೊಂಕಣಿ ಮಾನ್ಯತಾ ದಿವಸ್‌ನ ಬಗ್ಗೆ ಮಾಹಿತಿ ನೀಡಿದರು. ಬಂಟ ಕಲ್ಲು ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಗಂಪದಬೈಲುಜಯರಾಮ ಪ್ರಭು ಮಾತನಾಡಿದರು.

ಈ ಸಂದರ್ಭದಲ್ಲಿ ಕೊರೋನಾ ವಾರಿಯರ್ಸ್‌ ಪ್ರೀತಿ ಎಸ್. ನಾವೆಲ್ಕರ್ ಅವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಯುವವೃಂದದ ಅಧ್ಯಕ್ಷ ವಿಶ್ವನಾಥ್ ಬಾಂದೇಲ್ಕರ್ ವಹಿಸಿದ್ದರು. ದೇವಳದ ಆಡಳಿತ ಮಂಡಳಿ ಉಪಾಧ್ಯಕ್ಷ ಉಮೇಶ ಪ್ರಭು ಪಾಲಮೆ, ಸಮಾಜ ಸೇವಕ ರಾಘವೇಂದ್ರ ಪ್ರು ಕರ್ವಾಲು, ಪ್ರೊ.ವಿಠ್ಠಲ ನಾಯ್, ಶೈಲಾ ಪಾಟ್ಕರ್ ಉಪಸ್ಥಿತರಿದ್ದರು.

ಗೌರವಾಧ್ಯಕ್ಷ ಕೆ.ಆರ್.ಪಾಟ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿ ದರು. ಕಾರ್ಯದರ್ಶಿ ಆಶೀಷ್ ಪಾಟ್ಕರ್ ವಂದಿಸಿದರು. ರಚಿತಾ ಪಾಟ್ಕರ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News