ಬೆಂಗಳೂರಿನಲ್ಲಿ ಕೋವಿಡ್ ಗೆ ಮತ್ತೆ 25 ಮಂದಿ ಬಲಿ; 2,912 ಮಂದಿಗೆ ಸೋಂಕು ದೃಢ
Update: 2020-08-20 22:39 IST
ಬೆಂಗಳೂರು, ಆ.20: ನಗರದಲ್ಲಿ ಗುರುವಾರ ಒಂದೆ ದಿನ 2,912 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿಗೆ 25 ಜನರು ಮೃತರಾಗಿದ್ದಾರೆ.
ನಗರದಲ್ಲಿ ಒಟ್ಟು 99,822 ಸೋಂಕಿತರು ದೃಢಪಟ್ಟಿದ್ದು, ಇಲ್ಲಿಯವರೆಗೆ ನಗರದಲ್ಲಿ 1,613 ಜನರು ಸೋಂಕಿಗೆ ಬಲಿಯಾಗಿದ್ದಾರೆ. 64,022 ಜನರು ಇಲ್ಲಿಯವರೆಗೆ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಗುರುವಾರ 1,981 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 34,186 ಜನ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 31 ಜ್ವರ ಚಿಕಿತ್ಸಾಲಯದಲ್ಲಿ ಒಟ್ಟು 1,27,702 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.
ಬಿಬಿಎಂಪಿ ಕೋವಿಡ್ ವರದಿಯಲ್ಲಿ ನಗರದಲ್ಲಿ ಒಟ್ಟು ಸಕ್ರಿಯ 16,669 ಕಂಟೈನ್ಮೆಂಟ್ ಝೋನ್‍ಗಳಿವೆ. ಇದುವರೆಗೆ 37,863 ಕಂಟೈನ್ಮೆಂಟ್ ಝೋನ್‍ಗಳನ್ನು ಗುರುತಿಸಲಾಗಿದೆ.