ಅವಹೇಳನಕಾರಿ ಪೋಸ್ಟ್: ದೂರು ನೀಡಿದ ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ

Update: 2020-08-20 17:39 GMT

ಬೆಂಗಳೂರು, ಆ.20: ತಮ್ಮ ವಿರುದ್ಧ ಫೇಸ್‍ಬುಕ್‍ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ ದೂರು ದಾಖಲಿಸಿದ್ದಾರೆ.

ಚೇತನ್ ಕುಮಾರ್ ಎಂಬಾತ, ರಾಮಲಿಂಗಾರೆಡ್ಡಿ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ಪೋಸ್ಟ್ ಹಾಕಿದ್ದ. ಸಂತೋಷ್ ಎನ್ನುವ ವ್ಯಕ್ತಿ ಈ ಪೋಸ್ಟ್ ಶೇರ್ ಮಾಡಿದ್ದ ಎನ್ನಲಾಗಿದೆ.

ಇದರಿಂದ ಸಾರ್ವಜನಿಕ ಅಶಾಂತಿ ಉಂಟಾಗುವ ಸಂಭವವಿರುವ ಹಿನ್ನೆಲೆ ಚೇತನ್ ಹಾಗೂ ಸಂತೋಷ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಾಮಲಿಂಗಾರೆಡ್ಡಿ ದೂರು ನೀಡಿದ್ದಾರೆ. ಈ ಸಂಬಂಧ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News