×
Ad

ವೀರಪ್ಪನ್ ಸಹಚರ ಬಿಲವೇಂದ್ರನ್ ಸಾವು

Update: 2020-08-20 23:12 IST

ಮೈಸೂರು,ಆ.20: ಮೈಸೂರು ಜಿಲ್ಲಾ ಕೇಂದ್ರ ಕಾರಾಗೃಹದ ಖೈದಿಯಾಗಿದ್ದ ವೀರಪ್ಪನ್ ಸಹಚರ ಬಿಲವೇಂದ್ರನ್ (70) ಕೆ.ಆರ್. ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ಮೃತಪಟ್ಟಿದ್ದಾರೆ.

ಚಾಮರಾಜನಗರ ಜಿಲ್ಲೆಯ ಗಡಿಭಾಗ ಸೋರೆಕಾಯಿಮಡುವು ಬಳಿ ನೆಲಬಾಂಬ್ ಸ್ಫೋಟಿಸಿ 22 ಮಂದಿ ಸಾವಿಗೆ ಕಾರಣನಾಗಿದ್ದ ಇವರು ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದರು. ಶಿಕ್ಷೆಯ ಪ್ರಮಾಣವನ್ನು ನಂತರದ ದಿನಗಳಲ್ಲಿ ಜೀವಾವಧಿ ಶಿಕ್ಷೆಗೆ ಪರಿವರ್ತಿಸಲಾಗಿತ್ತು.

ಮಲೆಮಹದೇಶ್ವರ ಬೆಟ್ಟದ ಸಮೀಪದ ಮಾರ್ಟಳ್ಳಿಯವನಾದ ಈತ ಕಳೆದ 25 ವರ್ಷಗಳಿಂದಲೂ ಮೈಸೂರಿನ ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ ಬಿಲವೇಂದ್ರನ್ ಬಳಿಕ ನರಸಂಬಂಧಿ ಸಮಸ್ಯೆಗಳಿಂದಾಗಿ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಿನ್ನೆ ತಡರಾತ್ರಿ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News