×
Ad

ಚಿತ್ರ ನಿರ್ಮಾಪಕ ಆನಂದ ಅಪ್ಪುಗೋಳ ವಿರುದ್ಧ ಕೋರ್ಟ್ ಗೆ ಚಾರ್ಜ್‍ಶೀಟ್ ಸಲ್ಲಿಕೆ

Update: 2020-08-20 23:38 IST

ಬೆಳಗಾವಿ, ಆ.20: ಚಿತ್ರ ನಿರ್ಮಾಪಕ ಆನಂದ ಅಪ್ಪುಗೋಳ ಅವರ ಮಾಲಕತ್ವದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಬಹುಕೋಟಿ ಠೇವಣಿ ವಂಚನೆ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಬೆಳಗಾವಿ ಜಿಲ್ಲಾ ಕೋರ್ಟ್ ಗೆ ಚಾರ್ಜ್‍ಶೀಟ್ ಸಲ್ಲಿಸಿದ್ದಾರೆ.

ಸಿಐಡಿ ಡಿವೈಎಸ್‍ಪಿ ಪುರುಷೋತ್ತಮ ನೇತೃತ್ವದ ತಂಡ ಪ್ರಕರಣದ ತನಿಖೆ ನಡೆಸಿ ಎರಡು ದಿನಗಳ ಹಿಂದೆ ಬರೋಬ್ಬರಿ 2063 ಪುಟಗಳ ಚಾರ್ಜ್ ಶೀಟ್ ಅನ್ನು ಬೆಳಗಾವಿ ಜಿಲ್ಲಾ ಕೋರ್ಟ್ ಗೆ ಸಲ್ಲಿಸಿದೆ.

ಪ್ರಕರಣದಲ್ಲಿ ಒಟ್ಟು 13 ಜನರು ಭಾಗಿಯಾಗಿ 275 ಕೋಟಿ ರೂ. ಠೇವಣಿ ಹಣ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಸಂಗೊಳ್ಳಿ ರಾಯಣ್ಣ ಸೊಸೈಟಿಯು ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ 35 ಶಾಖೆಗಳನ್ನು ಹೊಂದಿದ್ದು, 26 ಸಾವಿರ ಜನರಿಂದ ಠೇವಣಿ ಸಂಗ್ರಹಿಸಿತ್ತು. ಆನಂದ ಅಪ್ಪುಗೋಳ ಸೇರಿ ಸೊಸೈಟಿಯ 13 ನಿರ್ದೇಶಕರು ಠೇವಣಿ ಹಣವನ್ನು ಸ್ವಂತಕ್ಕೆ ಬಳಸಿಕೊಂಡು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ದೂರಲಾಗಿತ್ತು.

ಈ ಕುರಿತು ಸಹಕಾರ ಇಲಾಖೆ ನಿಬಂಧಕರು 2017 ರಂದು ದೂರು ದಾಖಲಿಸಿದ್ದರು. ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸರಕಾರದ ಅವಧಿಯಲ್ಲಿ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News