×
Ad

ಸೆ.7ಕ್ಕೆ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ

Update: 2020-08-21 20:13 IST

ಉಡುಪಿ, ಆ. 21: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯಿಂದ ಸೆ.7ರಿಂದ 21ರವರೆಗೆ ಆಶಾ ಕಾರ್ಯಕರ್ತೆಯರು, ಅಂಗನ ವಾಡಿ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತೆಯರು ಮನೆಗಳಿಗೆ ಭೇಟಿ ನೀಡಿ 1ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತು ಹುಳಗಳ ನಿವಾರಣೆಗಾಗಿ ಆಲ್ಬೆಂಡೆಜೋಲ್ ಮಾತ್ರೆಗಳನ್ನು ವಿತರಿಸಲಿದ್ದಾರೆ.

ಆರೋಗ್ಯ ಇಲಾಖೆುಂದ ವಿತರಿಸಲಾಗುವ ಆಲ್ಬೆಂಡೆಜೋಲ್ ಮಾತ್ರೆಯನ್ನು ಪೋಷಕರು ಎರಡು ಚಮಚೆಗಳನ್ನು ಉಪಯೋಗಿಸಿ ಪುಡಿ ಮಾಡಿ ಮಕ್ಕಳಿಗೆ ಆರೋಗ್ಯ ಕಾರ್ಯಕರ್ತೆಯರ ಸಮ್ಮುಖದಲ್ಲಿ ಶುದ್ಧ ನೀರಿನೊಂದಿಗೆ ಸೇವಿಸು ವಂತೆ ನೋಡಿಕೊಳ್ಳಬೇಕು. ಇದರಿಂದ ಮಕ್ಕಳನ್ನು ಜಂತು ಹುಳುನಿಂದಾಗುವ ತೊಂದರೆಯಿಂದ ರಕ್ಷಿಸಲು ಸಾಧ್ಯವಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಉಡುಪಿ ಇವರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News