×
Ad

ಎನ್‌ಎಸ್‌ಯುಐ: ‘ನಮ್ಮೂರ ಹೆಮ್ಮೆ’ ಕಾರ್ಯಕ್ರಮಕ್ಕೆ ಮಿಥುನ್ ರೈ ಚಾಲನೆ

Update: 2020-08-21 21:32 IST

ಮಂಗಳೂರು, ಆ.21: ಎಸೆಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕಾಂಗ್ರೆಸ್‌ನ ಎನ್‌ಎಸ್‌ಯುಐ ನಿಂದ‘ನಮ್ಮೂರ ಹೆಮ್ಮೆ’ ಕಾರ್ಯಕ್ರಮದಡಿ ಪ್ರಶಸ್ತಿ ಪತ್ರ ಹಾಗೂ ‘ಸಂವಿಂಧಾನ ಓದು’ ಪುಸ್ತಕ ನೀಡಿ ಸನ್ಮಾನಿಸುವ ಕಾರ್ಯಕ್ರಮಕ್ಕೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಚಾಲನೆ ನೀಡಿದರು.

ನಗರದ ಬಿಜೈ ಕಾಪಿಕಾಡ್ ನಿವಾಸಿ ಎಸೆಸೆಲ್ಸಿ ವಿದ್ಯಾರ್ಥಿಗಳಾದ ಗುರುದತ್, ಪೃಥ್ವಿ ಹಾಗೂ ಕಾರ್‌ಸ್ಟ್ರೀಟ್ ಪ್ರದೇಶದಲ್ಲಿ ವಾಸವಿರುವ ವಲಸೆ ಕಾರ್ಮಿಕನ ಪುತ್ರ ಪಿಯುಸಿ ವಿದ್ಯಾರ್ಥಿ ಹನುಮಂತ್ ಕುಮಾರ್ ಅವರಿಗೆ ಸನ್ಮಾನಿಸಲಾಯಿತು.

ಪ್ರಸ್ತುತ ಹನುಮಂತ್ ಕುಮಾರ್ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ದರ್ಜೆ ಕಾಲೇಜಿಗೆ ಪ್ರವೇಶಾತಿ ಪಡೆದಿದ್ದು, ಈತನ ಮೂರು ವರ್ಷದ ಶೈಕ್ಷಣಿಕ ವಿದ್ಯಾಭ್ಯಾಸದ ಖರ್ಚು ಹಾಗೂ ಮಧ್ಯಾಹ್ನದ ಉಚಿತ ಊಟದ ವ್ಯವಸ್ಥೆ ಮಾಡಿಸುವುದಾಗಿ ಮಿಥುನ್ ರೈ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಂಗಳೂರು ಉತ್ತರ ಯುವ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಆಳ್ವ, ಎನ್‌ಎಸ್‌ಯುಐನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸವಾದ್ ಸುಳ್ಯ, ಮಂಗಳೂರು ಉತ್ತರ ಅಧ್ಯಕ್ಷ ಶೌನಕ್ ರೈ, ಶ್ರೇಯಸ್ ಭಟ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News