×
Ad

ಅಮರ್ ಸಿಂಗ್ ನಿಧನದಿಂದ ತೆರವಾದ ರಾಜ್ಯಸಭೆ ಸ್ಥಾನಕ್ಕೆ ಸೆ. 11ರಂದು ಉಪ ಚುನಾವಣೆ

Update: 2020-08-21 21:37 IST

ಹೊಸದಿಲ್ಲಿ, ಆ. 21: ಸಮಾಜವಾದಿ ಪಕ್ಷದ ಮಾಜಿ ನಾಯಕ ಅಮರ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ತೆರವಾದ ರಾಜ್ಯಸಭಾ ಸ್ಥಾನಕ್ಕೆ ಚುನಾವಣಾ ಆಯೋಗ ಸೆಪ್ಟಂಬರ್ 11ರಂದು ಉಪ ಚುನಾವಣೆ ನಡೆಸಲಿದೆ. ಅಮರ್ ಸಿಂಗ್ ಅವರ ನಿಧನದಿಂದ ತೆರವಾದ ರಾಜ್ಯಸಭಾ ಸ್ಥಾನಕ್ಕೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.

ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟಂಬರ್ 1. ಅಮರ್ ಸಿಂಗ್ ಅವರ ಅಧಿಕಾರಾವಧಿ 2022 ಎಪ್ರಿಲ್ 4ರಂದು ಕೊನೆಗೊಳ್ಳಲಿದೆ. ಆದುದರಿಂದ ಎರಡು ವರ್ಷಕ್ಕಿಂತ ಕಡಿಮೆ ಅವಧಿಗೆ ಈ ಆಯ್ಕೆ ನಡೆಯಲಿದೆ ಎಂದು ಚುನಾವಣಾ ಆಯೋಗದ ಅಧಿಸೂಚನೆ ತಿಳಿಸಿದೆ.

ಚುನಾವಣೆ ನಡೆಸುವ ಸಂದರ್ಭ ಸರಕಾರದ ಎಲ್ಲ ಕಡ್ಡಾಯ ಕ್ರಮಗಳನ್ನು ಅನುಸರಿಸಲಾಗುವುದು. ಚುನಾವಣೆ ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ನಡೆಯಲಿದೆ. ಮತದಾನ ನಡೆದ ಗಂಟೆಗಳ ಬಳಿಕ ಮತ ಎಣಿಕೆ ಆರಂಭವಾಗಲಿದೆ ಎಂದು ಅದು ತಿಳಿಸಿದೆ. ಅಮರ್ ಸಿಂಗ್ ಅವರು 1996ರಲ್ಲಿ ಮೊದಲ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಅನಂತರ 2010ರಲ್ಲಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿತ್ತು. 2016ರಲ್ಲಿ ಅವರು ರಾಜ್ಯಸಭೆಗೆ ಸ್ವತಂತ್ರ ಸದಸ್ಯನಾಗಿ ಆಯ್ಕೆಯಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News