×
Ad

ಪಾವೂರು: ಪ್ರಾಥಮಿಕ ಆರೋಗ್ಯ ಕೇಂದ್ರ ಉತ್ತಮಪಡಿಸುವಂತೆ ಒತ್ತಾಯಿಸಿ ಡಿವೈಎಫ್ಐಯಿಂದ ಭಿತ್ತಿಚಿತ್ರ ಪ್ರದರ್ಶನ

Update: 2020-08-21 22:39 IST

ಕೊಣಾಜೆ:  ಪ್ರಾಥಮಿಕ ಆರೋಗ್ಯ ಕೇಂದ್ರ ಉತ್ತಮಪಡಿಸುವಂತೆ ಒತ್ತಾಯಿಸಿ, ಖಾಸಗಿ ಆಸ್ಪತ್ರೆ ‌ನಿಯಂತ್ರಿಸಲು, ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗಾಗಿ ಹಾಗು  ಕೊರೋನ ಹೆಸರಲ್ಲಿ ಆಸ್ಪತ್ರೆಗಳ ಲೂಟಿಕೋರ ನೀತಿಯನ್ನು ಖಂಡಿಸಿ, ಸರಕಾರಿ ಆಸ್ಪತ್ರೆಯ ಅವ್ಯವಸ್ಥೆಯನ್ನು ವಿರೋಧಿಸಿ ಡಿವೈಎಫ್ಐ ಪಾವೂರು ಘಟಕದ ನೇತೃತ್ವದಲ್ಲಿ ಪಾವೂರು ಗ್ರಾಮ ಪಂಚಾಯತ್ ಕಚೇರಿ ಎದುರು ಶುಕ್ರವಾರ ಭಿತ್ತಿಪತ್ರ ಪ್ರದರ್ಶನ ನಡೆಸಿ, ಮನವಿ ಸಲ್ಲಿಸಲಾಯಿತು.

ಸಭೆಯನ್ನುದ್ದೇಶಿಸಿ ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ಅಧ್ಯಕ್ಷ ಅಶ್ರಫ್ ಕೆ.ಸಿ. ರೋಡ್, ಜಿಲ್ಲಾ ಉಪಾಧ್ಯಕ್ಷ ರಫೀಕ್ ಹರೇಕಳ ಮಾತನಾಡಿದರು.

ಸಭೆಯಲ್ಲಿ ಡಿವೈಎಫ್ಐ ಪಾವೂರು ಘಟಕದ ಮುಖಂಡರಾದ ಆಸಿಫ್ ಪಾವೂರು, ರಝಾಕ್ , ಖಾಲಿದ್, ಇಕ್ಬಾಲ್, ಮಜೀದ್, ಮುಬಾರಕ್, ಅಮೀರ್, ಹಫೀಝ್ ಉಪಸ್ಥಿತರಿದ್ದರು.

ಈ ಸಂದರ್ಭ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಪಂಚಾಯತ್ ಅಧಿಕಾರಿಗಳ ಮುಖಾಂತರ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News