×
Ad

ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಬಾಗಿನ ಅರ್ಪಣೆ

Update: 2020-08-21 22:45 IST

ಮೈಸೂರು,ಆ.21: ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಬಾಗಿನ ಅರ್ಪಿಸಿದರು. ಬಳಿಕ ಕಬಿನಿ ಜಲಾಶಯದ ಕೆಳಭಾಗದಲ್ಲಿ ಮೇಲ್ಮಟ್ಟದ ಸೇತುವೆ ಹಾಗೂ ಸಂಪರ್ಕ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಸಿಎಂ ರಾಜ್ಯಾದ್ಯಂತ ಉತ್ತಮವಾಗಿ ಮಳೆ ಆಗಿದೆ. ಇದರಿಂದಾಗಿ ಅಂತರ್ಜಲ ಮಟ್ಟ ಕುಸಿಯುವುದು ತಪ್ಪಿದೆ. ಎಲ್ಲ ಕಡೆ ಬಿತ್ತನೆ ಚನ್ನಾಗಿ ಆಗುತ್ತಿದೆ. ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಬಂದಿದ್ದೇನೆ. ಜಲಾಶಯಗಳು ತುಂಬಿರುವುದು ನಮ್ಮ ಸುದೈವ ಎಂದರು. ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ.ಎಸ್.ಆರ್.ನಾಗೇಂದ್ರ ವಿಚಾರಕ್ಕೆ ಪ್ರತಿಕ್ರಿಯಿಸಿ ಈಗಾಗಲೇ ಪರಿಹಾರ ಘೋಷಣೆ ಮಾಡಿದ್ದೇವೆ. ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದರು.

ಈ ಸಂದರ್ಭ ಮುಖ್ಯಮಂತ್ರಿಗಳ ಜೊತೆ ಸಚಿವರಾದ ರಮೇಶ್ ಜಾರಕಿಹೊಳಿ, ಎಸ್.ಟಿ.ಸೋಮಶೇಖರ್, ಸ್ಥಳೀಯ ಶಾಸಕರುಗಳಾದ ಅನಿಲ್ ಚಿಕ್ಕಮಾದು, ಹರ್ಷವರ್ಧನ್, ಜಿ.ಪಂ.ಅಧ್ಯಕ್ಷೆ ಪರಿಮಳಾ ಶ್ಯಾಮ್, ಜಿಲ್ಲಾದಿಕಾರಿ ಅಭಿರಾಮ್ ಜಿ.ಶಂಕರ್, ಸೇರಿದಂತಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News