ಸರಕುಗಳು, ಜನರು ಅಂತಾರಾಜ್ಯ ಪ್ರಯಾಣಕ್ಕೆ ಯಾವುದೇ ನಿರ್ಬಂಧವಿಲ್ಲ: ರಾಜ್ಯಗಳಿಗೆ ತಿಳಿಸಿದ ಕೇಂದ್ರ ಸರಕಾರ

Update: 2020-08-22 15:30 GMT

ಹೊಸದಿಲ್ಲಿ: ಅನ್ ಲಾಕ್ 3 ಅಥವಾ ಕೊರೋನ ಲಾಕ್ ಡೌನ್ ಸಡಿಲಿಕೆಯ ಮೂರನೆ ಹಂತದ ಮಾರ್ಗಸೂಚಿಗಳ ಪ್ರಕಾರ ಅಂತಾರಾಜ್ಯ ಅಥವಾ ರಾಜ್ಯದೊಳಗೆ ಸರಕು ಮತ್ತು ಜನರ ಓಡಾಟಕ್ಕೆ ಯಾವುದೇ ನಿರ್ಬಂಧಗಳಿಲ್ಲ ಎಂದು ರಾಜ್ಯಗಳಿಗೆ ಬರೆದಿರುವ ಪತ್ರದಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ತಿಳಿಸಿದ್ದಾರೆ.

ಕೆಲವೊಂದು ರಾಜ್ಯಗಳಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಇಂತಹ ನಿರ್ಬಂಧಗಳನ್ನು ವಿಧಿಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಇಂತಹ ನಿರ್ಬಂಧಗಳು ಪೂರೈಕೆ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತಿದ್ದು, ಆರ್ಥಿಕ ಚಟುವಟಿಕೆಗಳು ಮತ್ತು ಉದ್ಯೋಗಕ್ಕೆ ಅಡ್ಡಿಪಡಿಸುತ್ತಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಜನರು ಮತ್ತು ಸರಕುಗಳ ಚಲನವಲನಕ್ಕೆ ಯಾವುದೇ ಪ್ರತ್ಯೇಕ ಅನುಮತಿ ಅಥವಾ ಇ-ಪರ್ಮಿಟ್ ನ ಅಗತ್ಯವಿಲ್ಲ ಎಂದು ಮಾರ್ಗಸೂಚಿಯ 5ನೆ ಪ್ಯಾರಾದಲ್ಲಿ ತಿಳಿಸಲಾಗಿದೆ ಎಂದು ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News