ಕ.ರಾ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆಯಿಂದ ಸನ್ಮಾನ ಕಾರ್ಯಕ್ರಮ
Update: 2020-08-23 21:34 IST
ಉಳ್ಳಾಲ : ಕ.ರಾ. ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ದ.ಕ. ಜಿಲ್ಲಾ ಸಮಿತಿ ವತಿಯಿಂದ ಯೂತ್ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಮಾಹಿನ್ ಜಾಸಿಂ ಅವರಿಗೆ ಸನ್ಮಾನ ಕಾರ್ಯಕ್ರಮ ತೊಕ್ಕೋಟ್ಟು ಖಾಸಗಿ ಸಭಾಂಗಣದಲ್ಲಿ ನಡೆಯಿತು.
ಕ.ರಾ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ದ.ಕ. ಜಿಲ್ಲಾ ಅಧ್ಯಕ್ಷ ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ ಮಾತನಾಡಿದರು. ಕ.ರಾ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ದ.ಕ ಜಿಲ್ಲಾ ಸಮಿತಿಯ ಕಾನೂನು ಸಲಹೆಗಾರ ಆರ.ಕೆ.ಮದನಿ ಅಮ್ಮೆಂಬಳ ಪ್ರಾಸ್ತವಿಕವಾಗಿ ಮಾತನಾಡಿದರು.
ಕ.ರಾ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ದ.ಕ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಮುನೀರ್ ಅಸೈಗೋಳಿ, ಪ್ರಧಾನ ಕಾರ್ಯದರ್ಶಿ ನಝೀರ್ ಬಾರ್ಲಿ, ಕೋಶಾಧಿಕಾರಿ ಸಿರಾಜ್ ಅಭಯಾ, ಮಂಗಳೂರು ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಸಾಜಿದ್ ಉಳ್ಳಾಲ್, ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಆಸಿಫ್ ಸರಪಾಡಿ ಮೊದಲಾದವರು ಉಪಸ್ಥಿತರಿದ್ದರು.