×
Ad

ಬಾಂಗ್ಲಾದೇಶದ ಬ್ಯಾಟಿಂಗ್ ಕೋಚ್ ನೀಲ್ ಮೆಕೆಂಝಿ ಪದತ್ಯಾಗ

Update: 2020-08-23 23:09 IST

ಢಾಕಾ, ಆ.23: ಕೋವಿಡ್-19 ಬಿಕ್ಕಟ್ಟಿನ ಕಾರಣದಿಂದ ತನ್ನ ಕುಟುಂಬದೊಂದಿಗೆ ಕಾಲ ಕಳೆಯಲು ಬಯಸಿರುವ ನೀಲ್ ಮೆಕೆಂಝಿ ಬಾಂಗ್ಲಾದೇಶದ ಬ್ಯಾಟಿಂಗ್ ಕೋಚ್ ಹುದ್ದೆಯನ್ನು ತ್ಯಜಿಸಿದ್ದಾರೆ ಎಂದು ಬಾಂಗ್ಲಾ ಕ್ರಿಕೆಟ್ ಮಂಡಳಿ(ಬಿಸಿಬಿ)ತಿಳಿಸಿದೆ.

ದಕ್ಷಿಣ ಆಫ್ರಿಕಾದ ಮಾಜಿ ಟೆಸ್ಟ್ ಆಟಗಾರ ಮೆಕೆಂಝಿ 2018ರ ಜುಲೈನಲ್ಲಿ ಕೋಚ್ ಹುದ್ದೆಯನ್ನು ವಹಿಸಿಕೊಂಡಿದ್ದರು. ಸೀಮಿತ ಓವರ್ ಕ್ರಿಕೆಟ್‌ನಲ್ಲಿ ತಂಡಕ್ಕೆ ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ ಯಶಸ್ಸು ಕಂಡಿದ್ದರು.

‘‘ಬಾಂಗ್ಲಾದೇಶದ ಬ್ಯಾಟಿಂಗ್ ಕೋಚ್ ಹುದ್ದೆಯಲ್ಲಿ ಮುಂದುವರಿಯಲು ತನ್ನಿಂದ ಸಾಧ್ಯವಾಗುತ್ತಿಲ್ಲ. ವಿಶ್ವದ ಚಿತ್ರಣ ಬದಲಾಗುತ್ತಿರುವ ಕಾರಣ ದಕ್ಷಿಣ ಆಫ್ರಿಕಾದಲ್ಲಿರುವ ತನ್ನ ಕುಟುಂಬದೊಂದಿಗೆ ಕಾಲ ಕಳೆಯುವುದು ನನಗೆ ಅತ್ಯಂತ ಮುಖ್ಯವಾಗಿದೆ’’ಎಂದು ನೀಲ್ ನಮಗೆ ಮಾಹಿತಿ ನೀಡಿದ್ದಾರೆ ಎಂದು ಬಿಸಿಬಿ ಮುಖ್ಯ ಕಾರ್ಯನಿರ್ವಾಹಕ ನಿಝಾಂ ಚೌಧರಿ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News