×
Ad

ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿ ಆತ್ಮಹತ್ಯೆ

Update: 2020-08-24 17:46 IST

ಬೆಂಗಳೂರು, ಆ.24: ಗಾಂಜಾ ಮಾರಾಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ವಿಚಾರಣಾಧೀನ ಕೈದಿ ಇಲ್ಲಿನ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.

ಹೊಸಕೋಟೆಯ ದಾಸರಹಳ್ಳಿ ನಿವಾಸಿ ಲಕ್ಷ್ಮಯ್ಯ ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.

ಹೊಸಕೋಟೆ, ಆನೇಕಲ್, ಸಿಲಿಕಾನ್ ಸಿಟಿಯ ಬಳಿ ತನ್ನದೇ ಗುಂಪು ಕಟ್ಟಿಕೊಂಡು ಯುವಕರನ್ನು ಗುರಿಯಾಗಿಸಿಕೊಂಡು ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ. ಈ ಸಂಬಂಧ ಗಾಂಜಾ ಮಾರಾಟ ಆರೋಪದಡಿ ಹೊಸಕೋಟೆ ಠಾಣಾ ಪೊಲೀಸರು ಬಂಧಿಸಿ ಆ.18ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಸದ್ಯ ಮಾನಸಿಕ ಖಿನ್ನತೆಗೆ ಒಳಗಾಗಿ ಆರೋಪಿ ಪರಪ್ಪನ ಅಗ್ರಹಾರ ಜೈಲ್ಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News