ಅಬ್ದುಲ್ಲಾ ಮುಸ್ಲಿಯಾರ್ ಕಿನ್ಯ
Update: 2020-08-24 17:54 IST
ಉಳ್ಳಾಲ: ಕಿನ್ಯ ಕೇಂದ್ರ ಜುಮಾ ಮಸೀದಿಯಲ್ಲಿ ಸುಮಾರು 40 ವರ್ಷಗಳ ಕಾಲ ಮುಹಝ್ಝಿನಾಗಿ ಸೇವೆ ಸಲ್ಲಿಸಿದ ಅಬ್ದುಲ್ಲಾ ಮುಸ್ಲಿಯಾರ್ ಕಿನ್ಯ (58) ಅವರು ಸೋಮವಾರ ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು.
ಮೃತರು ಪತ್ನಿ, ಇಬ್ಬರು ಪುತ್ರರು, ನಾಲ್ಕು ಮಂದಿ ಪುತ್ರಿಯರು ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಅವರ ನಿಧನಕ್ಕೆ ಕಿನ್ಯ ಕೇಂದ್ರ ಜುಮಾ ಮಸೀದಿ ಅಧ್ಯಕ್ಷ, ಕಾರ್ಯದರ್ಶಿ, ಪದಾಧಿಕಾರಿಗಳು, ಜಮಾಅತ್ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.