ಪ್ರಣವ್ ಮುಖರ್ಜಿ ಆರೋಗ್ಯ ಸ್ಥಿತಿ ಸ್ಥಿರ

Update: 2020-08-24 14:03 GMT

ಹೊಸದಿಲ್ಲಿ, ಆ. 24: ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಕೋಮಾ ಸ್ಥಿತಿ ಮುಂದುವರಿದಿದ್ದು, ಶ್ವಾಸೋಚ್ಚ್ವಾಸದ ಸೋಂಕಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರ್ಮಿಸ್ ರಿಸರ್ಚ್ ಆ್ಯಂಡ್ ರೆಫರಲ್ ಆಸ್ಪತ್ರೆಯ ವೈದ್ಯಕೀಯ ಬುಲೆಟಿನ್ ಮಂಗಳವಾರ ತಿಳಿಸಿದೆ.

ಮುಖರ್ಜಿ ಅವರ ಆರೋಗ್ಯ ಸ್ಥಿತಿಯಲ್ಲಿ ಇಂದು ಬೆಳಗ್ಗೆ ವರೆಗೆ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಅವರು ಇನ್ನೂ ಕೋಮಾ ಸ್ಥಿತಿಯಲ್ಲೇ ಇದ್ದಾರೆ. ಅವರಿಗೆ ವೆಂಟಿಲೇಟರ್ ವ್ಯವಸ್ಥೆ ಮುಂದುವರಿಸಲಾಗಿದೆ ಎಂದು ಬುಲೆಟಿನ್ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News