×
Ad

ಮೀನುಗಾರರಿಂದ ಅರ್ಜಿ ಆಹ್ವಾನ

Update: 2020-08-24 19:59 IST

ಉಡುಪಿ, ಆ.24:ಪ್ರಸ್ತಕ ಸಾಲಿನ ಮೀನುಗಾರಿಕಾ ಇಲಾಖೆಯ ರಾಜ್ಯ ವಲಯದ ಯೋಜನೆ ಅಡಿಯಲ್ಲಿ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನ ಗೊಳಿಸಲಾಗು ತ್ತಿದ್ದು ಉಡುಪಿ ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿಗಳನ್ನು ಆಹ್ವಾನಿಸ ಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ.

ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಮೀನುಗಾರಿಕಾ ಸಹಾಯಕ ನಿರ್ದೇಶಕರು ಉಡುಪಿ, ಕುಂದಾಪುರ, ಕಾರ್ಕಳ ಕಚೇರಿಗೆ ಸಲ್ಲಿಸಬಹುದು ಎಂದು ಮೀನುಗಾರಿಕಾ ಸಹಾಯಕ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News