×
Ad

ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2020-08-24 20:34 IST

ಬೆಂಗಳೂರು, ಆ..24: ರಾಜ್ಯ ಕೃಷಿ ಕ್ಷೇತ್ರದಲ್ಲಿ ವಿನೂತನ/ಹೊಸ ಆನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಕ್ರಮಗಳಿಂದ ಸಾಧನೆ ಮಾಡಿದ ಸೃಜನಶೀಲ ರೈತರಿಂದ 2020-21 ನೇ ಸಾಲಿನ ‘ಕೃಷಿ ಪಂಡಿತ’ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ರೈತರು ಅರ್ಜಿ ಸಲ್ಲಿಸಲು ಸೆ.7 ಕೊನೆಯ ದಿನವಾಗಿದೆ. ಅರ್ಜಿ ನಮೂನೆ, ಸ್ವರ್ಧಿಸಲು ಅರ್ಹತೆ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ವಿಸ್ತರಣಾ ಕಾರ್ಯಕರ್ತರನ್ನಾಗಲಿ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರನ್ನಾಗಲಿ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News