ಮಂಗಳೂರು ವಿಮಾನ ನಿಲ್ದಾಣ ಖಾಸಗೀಕರಣಕ್ಕೆ ಸಿಪಿಎಂ ಖಂಡನೆ

Update: 2020-08-24 15:05 GMT

ಬೆಂಗಳೂರು, ಆ.24: ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯನ್ನು ಖಾಸಗಿ ಕಂಪೆನಿಗೆ ವಹಿಸಿರುವುದನ್ನು ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸ್ ವಾದಿ) ತೀವ್ರವಾಗಿ ಖಂಡಿಸಿದ್ದು, ಕೇಂದ್ರ ಸರಕಾರ ಕೂಡಲೇ ಇದನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದೆ.

ದೇಶದ ಲಾಭದಾಯಕ ಸಾರ್ವಜನಿಕ ಸಂಸ್ಥೆಗಳು ಹಾಗೂ ಆಸ್ತಿಗಳ ಅಕ್ರಮ ಮಾರಾಟಕ್ಕೆ ಕೇಂದ್ರ ಸರಕಾರ ಮುಂದಾಗಿದೆ. ಇದೀಗ ಅದಾನಿಯ ಕಂಪೆನಿಗೆ ಅಕ್ರಮ ದರಕ್ಕೆ ವಿಶ್ವದ ಅತ್ಯಂತ ಶ್ರೇಷ್ಠ ದರ್ಜೆಯ ಕರ್ನಾಟಕದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮಾರಾಟ ಮಾಡಲು ಮುಂದಾಗಿದ್ದಾರೆ. ಈ ನಿಲ್ದಾಣದ ಖಾಸಗೀಕರಣವನ್ನು ಕೂಡಲೇ ಕೈ ಬಿಡಬೇಕು ಎಂದು ಸಿಪಿಎಂ ಆಗ್ರಹಿಸಿದೆ.

ರಾಜ್ಯ ಸರಕಾರ ಲಾಭದಾಯಕವಾಗಿ ನಡೆಯುವ ಈ ಸಂಸ್ಥೆಯ ಖಾಸಗೀಕರಣವನ್ನು ತಡೆಯಲು ಮುಂದಾಗದೇ ಮೌನ ವಹಿಸಿ ನೆರವಾಗುತ್ತಿರುವುದು ಅಕ್ಷಮ್ಯವಾಗಿದೆ. ಕೇರಳ ಸರಕಾರ ತಿರುವನಂತಪುರಂನ ವಿಮಾನ ನಿಲ್ದಾಣವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಆದರೆ, ಕರ್ನಾಟಕ ಸರಕಾರ ಮೌನ ತಾಳಿರುವುದು ಖಂಡನೀಯ ಎಂದು ಸಿಪಿಎಂ ಕಾರ್ಯದರ್ಶಿ ಯು.ಬಸವರಾಜು ಪ್ರಕಟನೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News