ಸ್ಪೋರ್ಟ್ಸ್ ಕಾಂಪ್ಲೆಕ್ಸ್, ಸ್ಟೇಡಿಯಂ ತೆರೆಯಲು ಅನುಮತಿ ನೀಡಿದ ರಾಜ್ಯ ಸರಕಾರ

Update: 2020-08-24 17:27 GMT

ಬೆಂಗಳೂರು, ಆ.24: ಕೊರೋನ ಸೋಂಕು ತಡೆಗಟ್ಟಲು ವಿಧಿಸಲಾಗಿದ್ದ ಲಾಕ್‍ಡೌನ್ ಈಗಾಗಲೇ ತೆರವುಗೊಳಿಸಿದ್ದು, ಇಂದು ರಾಜ್ಯ ಸರಕಾರ ಪ್ರಕಟಿಸಿದ ಹೊಸ ಮಾರ್ಗಸೂಚಿಯಲ್ಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಮತ್ತು ಸ್ಟೇಡಿಯಂಗಳನ್ನು ವೀಕ್ಷಕರ ನಿರ್ಬಂಧದೊಂದಿಗೆ ಅಭ್ಯಾಸಕ್ಕಾಗಿ ತೆರೆಯಲು ಅನುಮತಿಸಲಾಗಿದೆ.

ಅದಾಗ್ಯೂ ಸಿನಿಮಾ ಮಂದಿರಗಳು, ಈಜುಕೊಳಗಳು, ಮನೋರಂಜನಾ ಉದ್ಯಾನವನಗಳು, ಚಿತ್ರಮಂದಿರಗಳು, ಬಾರ್ ಗಳು, ಸಭಾಂಗಣಗಳು, ಅಸೆಂಬ್ಲಿ ಹಾಲ್‍ಗಳು ಮತ್ತು ಅಂತಹುದೇ ಸ್ಥಳಗಳಿಗೆ ನಿರ್ಬಂಧ ಮುಂದುವರಿಸಲಾಗಿದೆ.

ಸಾಮಾಜಿಕ, ರಾಜಕೀಯ, ಕ್ರೀಡೆ, ಮನೋರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಗಳು ಮತ್ತು ಇತರೆ ಬೃಹತ್ ಸಭೆಗಳ ನಿರ್ಬಂಧಿಸಲಾಗಿದ್ದು, 65 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು, ಗರ್ಭಿಣಿಯರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಅಗತ್ಯ ಮತ್ತು ಆರೋಗ್ಯ ಉದ್ದೇಶಗಳನ್ನು ಹೊರತುಪಡಿಸಿ ಮನೆಯಲ್ಲಿಯೇ ಇರಲು ಆದೇಶಿಸಲಾಗಿದೆ.

ಆದರೆ ರಾಜ್ಯದಲ್ಲಿನ ಸಾಮಾಜಿಕ ಕ್ಲಬ್‍ಗಳಲ್ಲಿ ಕ್ರೀಡಾ ಚಟುವಟಿಕೆಗಳನ್ನು ನಡೆಸಲು ಹಾಗೂ ಮೇಜಿನ ಮೇಲೆ ಆಹಾರ ವ್ಯವಸ್ಥೆಯನ್ನು ಕಲ್ಪಿಸಲು ಅವಕಾಶವಿರುವ ಕುರಿತು ಸ್ಪಷ್ಟಪಡಿಸಲಾಗಿದೆ. ಸಾಮಾಜಿಕ ಕ್ಲಬ್‍ಗಳಲ್ಲಿ ಮದ್ಯ ಸರಬರಾಜನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಸರಕಾರದ ಪ್ರಧಾನ ಕಾರ್ಯದರ್ಶಿ ಕಂದಾಯ ಇಲಾಖೆಯ ಅಂಜುಂ ಪರ್ವೇಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News