ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಖಂಡಿಸಿ ಆನ್‍ಲೈನ್ ಪ್ರತಿಭಟನೆ

Update: 2020-08-24 17:45 GMT

ವಿಜಯಪುರ, ಆ.24: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಖಂಡಿಸಿ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ನೇತೃತ್ವದಲ್ಲಿ ಸೋಮವಾರ ವಿಜಯಪುರ ನಗರದಲ್ಲಿ ಆನ್‍ಲೈನ್ ಪ್ರತಿಭಟನೆ ನಡೆಸಲಾಯಿತು.

ಹಾಸ್ಟೆಲ್ ಸಿಬ್ಬಂದಿ, ಬಿಸಿಯೂಟ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಆನ್‍ಲೈನ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮೂಲಕ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯನ್ನು ಖಂಡಿಸಿ, ಈ ನೀತಿಯನ್ನು ತಕ್ಷಣದಿಂದಲೇ ಕೈಬಿಡಬೇಕೆಂದು ಒತ್ತಾಯಿಸಿದರು.

ಹಳೆಯ ಮೌಢ್ಯ ಬಿತ್ತುವ, ಕೋಮುವಾದಿ ವಿಚಾರಗಳನ್ನು ಮಕ್ಕಳ ಮನಸ್ಸಿನಲ್ಲಿ ಬಿತ್ತಿ, ಕುರುಡು ರಾಷ್ಟ್ರಭಕ್ತಿ ಮೂಡಿಸಿ, ಯಂತ್ರ ಮಾನವರನ್ನಾಗಿ ಮಾಡುವ ಹುನ್ನಾರ ಇದರಲ್ಲಿದೆ ಎಂದು ಆರೋಪಿಸಿದರು.    

ಎಐಯುಟಿಯುಸಿ ಜಿಲ್ಲಾ ಅಧ್ಯಕ್ಷ ಎಚ್.ಟಿ.ಮಲ್ಲಿಕಾರ್ಜುನ, ಕಾರ್ಯದರ್ಶಿ ಸುನಿಲ ಸಿದ್ರಾಮಶೆಟ್ಟಿ, ಸದಸ್ಯರಾದ ಮಹಾದೇವಿ ಧರ್ಮಶೆಟ್ಟಿ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News