ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಕೊರೋನ ಸೋಂಕು

Update: 2020-08-25 13:15 GMT

ಬೆಂಗಳೂರು, ಆ.25: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಕೋವಿಡ್ ಸೋಂಕು ತಗಲಿರುವುದು ದೃಢಪಟ್ಟಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನನಗೆ ಜ್ವರವಿದ್ದು, ಕೊರೋನ ಸೋಂಕು ತಗುಲಿರುವುದು ದೃಢಪಟ್ಟಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ವೈದರ ಉತ್ತಮ ಆರೈಕೆಯಲ್ಲಿದ್ದೇನೆ. ನಿಮ್ಮೆಲ್ಲರ ಹಾರೈಕೆ ಹಾಗೂ ಆಶೀರ್ವಾದದಿಂದ ಆದಷ್ಟು ಬೇಗ ಗುಣಮುಖನಾಗಿ ಬರುತ್ತೇನೆ. ನನ್ನ ಜೊತೆ ಸಂಪರ್ಕದಲ್ಲಿದ್ದವರು ಎಚ್ಚರಿಕೆ ವಹಿಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾಗಾಂಧಿ, ಮಾಜಿ ಅಧ್ಯಕ್ಷ ರಾಹುಲ್‍ ಗಾಂಧಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಅನೇಕ ಹಿರಿಯ ಕಾಂಗ್ರೆಸ್ ನಾಯಕರು ದೂರವಾಣಿ ಕರೆ ಮಾಡಿ ಆರೋಗ್ಯ ಕ್ಷೇಮ ವಿಚಾರಿಸಿದರು. ಆದಷ್ಟು ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಸೇರಿದಂತೆ ಇನ್ನಿತರರು ಡಿ.ಕೆ.ಶಿವಕುಮಾರ್ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದಾರೆ.

ಶಿವಲಿಂಗೇಗೌಡಗೂ ಕೋವಿಡ್ ಸೋಂಕು

ಹಾಸನ ಜಿಲ್ಲೆಯ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡಗೂ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಇನ್ನಿತರರು ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News