×
Ad

ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆ

Update: 2020-08-25 13:51 IST

ಹೊಸದಿಲ್ಲಿ, ಆ.25: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕುಪ್ಪುಸಾಮಿ ಮಂಗಳವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್, ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್ ಮುರುಗನ್ ಉಪಸ್ಥಿತರಿದ್ದರು ಎಂದು ಬಿಜೆಪಿ ಟ್ವೀಟ್ ಮಾಡಿದೆ.

2019ರಲ್ಲಿ ಪೊಲೀಸ್ ಸೇವೆಗೆ ರಾಜೀನಾಮೆ ನೀಡಿದ್ದ ಅಣ್ಣಾಮಲೈ ರಾಜಕೀಯ ಪ್ರವೇಶಿಸುವ ಕುರಿತ ಊಹಾಪೋಹಕ್ಕೆ ತೆರೆಬಿದ್ದಿದೆ. ಪ್ರಧಾನಿ ನರೇಂದ್ರ ಮೋದಿಯ ಅಭಿಮಾನಿ ತಾನಾಗಿದ್ದು, ಬಿಜೆಪಿ ಸ್ವಜನ ಪಕ್ಷಪಾತ ಅಥವಾ ವ್ಯಕ್ತಿಪೂಜೆಗೆ ಅವಕಾಶವಿಲ್ಲದ ಏಕೈಕ ಪಕ್ಷವಾಗಿದೆ ಎಂದು ಅಣ್ಣಾಮಲೈ ಹೇಳಿದ್ದಾರೆ. ತಮಿಳುನಾಡಿನಲ್ಲಿ ಬಿಜೆಪಿಯ ಬಗ್ಗೆ ಇರುವ ತಪ್ಪು ಗ್ರಹಿಕೆಯನ್ನು ದೂರಗೊಳಿಸಿ ಅರಿವು ಮೂಡಿಸಲು ನಿರಂತರ ಪ್ರಯತ್ನಿಸುವುದಾಗಿ ಅಣ್ಣಾಮಲೈ ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News