ಚಿನ್ನಾಭರಣ ಕಳವು ಪ್ರಕರಣ: ನೇಪಾಳ ಮೂಲದ ಹಲವರ ಬಂಧನ

Update: 2020-08-25 12:10 GMT

ಬೆಂಗಳೂರು, ಆ.25: ಗುಂಪು ಕಟ್ಟಿಕೊಂಡು ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ ಆರೋಪದಡಿ ನೇಪಾಳ ಮೂಲದ ಹಲವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 360 ಗ್ರಾಂ ಚಿನ್ನ, 25 ಕೆಜಿ ಬೆಳ್ಳಿ, ಲ್ಯಾಪ್‍ಟಾಪ್, ಕೃತ್ಯಕ್ಕೆ ಬಳಸಿದ್ದ ಗ್ಯಾಸ್‍ಕಟ್ಟರ್ ಹಾಗೂ ಆಟೊ ವಶಪಡಿಸಿಕೊಂಡಿದ್ದಾರೆ.

ನೇಪಾಳ ಮೂಲದ ಅಮರ್ ಸಿಂಗ್, ಗಣೇಶ ಬಹದ್ದೂರ್ ಶಾಹಿ, ಕೃಷ್ಣಾ ರಾಜ್, ಚರಣ್ ಸಿಂಗ್, ಸಲೀಂ ಪಾಷಾ, ಶಾಹಿದ್ ಬಂಧಿತರು ಎಂದು ತಿಳಿದುಬಂದಿದೆ.

ಇವರು ಹಗಲು ಹೊತ್ತಿನಲ್ಲಿ ಸೆಕ್ಯೂರಿಟಿ ಕೆಲಸ ಮಾಡುತ್ತಾ ಐಷಾರಾಮಿ ಮನೆ, ಚಿನ್ನಾಭರಣ ಅಂಗಡಿಗಳನ್ನು ಗುರಿಯಾಗಿಸಿಕೊಂಡು ರಾತ್ರಿ ತಮ್ಮ ಗುಂಪಿನೊಂದಿಗೆ ಆಟೋ ಮುಖಾಂತರ ಹೋಗಿ ಕಳವು ಮಾಡುತ್ತಿದ್ದರು ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.

ಇತ್ತೀಚೆಗೆ ಇಲ್ಲಿನ ವೈಟ್‍ಫೀಲ್ಡ್ ನ ಮಾತಾಜಿ ಜ್ಯುವೆಲ್ಲರಿಗೆ ನುಗ್ಗಿ ಚಿನ್ನಾಭರಣ, ಬೆಳ್ಳಿ ವಸ್ತುಗಳನ್ನು ಕಳವು ಮಾಡಿದ್ದರು. ಈ ಸಂಬಂಧ ದಾಖಲಾಗಿದ್ದ ದೂರುಗಳ ಬಗ್ಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News