ಆ.26ರಂದು ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ
Update: 2020-08-25 17:57 IST
ಉಡುಪಿ, ಆ.25: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯು ಆ.26ರಂದು ಅಪರಾಹ್ನ 2:30ಕ್ಕೆ ಉಡುಪಿ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಜರಗಲಿದೆ.
ಈ ಸಭೆಯಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ವಿದ್ಯಾ ಬಾಲ ಕೃಷ್ಣ, ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಕೆಂಪರಾಜ್ ಗೌಡ, ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ರಾಜ್ಯ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗು ಪಕ್ಷದ ಮುಖಂಡರು ಭಾಗವಹಿಸಲಿರುವರು ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಶ್ವಾಸ್ ವಿ.ಅಮೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.