ಗಾಂಜಾ ಮಾರಾಟದ ಬಗ್ಗೆ ದೂರು ನೀಡಿದ್ದಕ್ಕೆ ಹಲ್ಲೆ
Update: 2020-08-25 18:02 IST
ಕೋಟ, ಆ.25: ಗಾಂಜಾ ಮಾರಾಟದ ಬಗ್ಗೆ ದೂರು ನೀಡಿದ್ದಕ್ಕೆ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿರುವ ಘಟನೆ ಆ.24ರಂದು ಬೆಳಗ್ಗೆ ಸಾಸ್ತಾನ ಗುಂಡ್ಮಿ ಎಂಬಲ್ಲಿ ನಡೆದಿದೆ.
ಹಲ್ಲೆಗೆ ಒಳಗಾದ ಗುಂಡ್ಮಿಯ ಪ್ರವೀಣ ಯಕ್ಷಿಮಠ(32) ಎಂಬವರು ಕೋಟೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚರಣ ಕುಂದರ್ ಹಾಗೂ ಅಭಿಷೇಕ್ ಹಲ್ಲೆ ನಡೆಸಿರುವ ಆರೋಪಿಗಳಾಗಿದ್ದಾರೆ.
ಆರೋಪಿಗಳ ವಿರುದ್ಧ ಗಾಂಜಾ ಮಾರಾಟ ಮಾಡುವ ಬಗ್ಗೆ ಪೊಲೀಸರಿಗೆ ದೂರು ನೀಡಿದಕ್ಕಾಗಿ ಪ್ರವೀಣ್ ಯಕ್ಷಿಮಠ ಅವರ ಮನೆಯೊಳಗೆ ಅಕ್ರಮ ಪ್ರವೇಶಿಸಿದ ಆರೋಪಿಗಳು ಮರದ ದೊಣ್ಣೆಯಿಂದ ಹಲ್ಲೆ ನಡೆಸಿ, ಜೀವ ಬೆದರಿಕೆಯೊಡ್ಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.