ರಾಜ್ಯದಲ್ಲಿ ಇದುವರೆಗೆ 5214 ಪೊಲೀಸರಲ್ಲಿ ಕೊರೋನ ದೃಢ, 2183 ಮಂದಿ ಗುಣಮುಖ
Update: 2020-08-25 20:20 IST
ಬೆಂಗಳೂರು, ಆ.25: ಕೊರೋನ ವಾರಿಯರ್ ಆಗಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಪೊಲೀಸರಲ್ಲಿ ಸೋಂಕು ಹೆಚ್ಚಾಗಿ ಕಂಡು ಬರುತ್ತಿದೆ. ಸದ್ಯ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕೊರೋನ ಸೋಂಕಿಗೆ ಗುರಿಯಾದವರ ಸಂಖ್ಯೆ 5214ಕ್ಕೆ ಏರಿಕೆಯಾಗಿದೆ.
ಬೆಂಗಳೂರು ನಗರದಲ್ಲಿ 1755 ಕೇಸ್‍ಗಳಿದ್ದು, ಅದರಲ್ಲಿ 1520 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಹಾಗೆಯೇ ರಾಜ್ಯದಲ್ಲಿ ಒಟ್ಟಾರೆ 2183 ಗುಣಮುಖರಾಗಿದ್ದಾರೆ. ಇನ್ನು ಈವರೆಗೆ ಬೆಂಗಳೂರಿನಲ್ಲಿ ಕೊರೋನದಿಂದಾಗಿ 13 ಮಂದಿ ಸಾವಿಗೀಡಾಗಿದ್ದು, ರಾಜ್ಯದಲ್ಲಿ 23 ಮಂದಿ ಸಾವಿಗೀಡಾಗಿದ್ದಾರೆ.
ಸದ್ಯ ರಾಜ್ಯ ಪೊಲೀಸ್ ಇಲಾಖೆಯ ಮಹಾನಿರ್ದೇಶಕ, ಆಡಳಿತಾಧಿಕಾರಿಗಳು ಹಾಗೂ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವ ವೇಳೆ ಮುಂಜಾಗೃತ ಕ್ರಮಗಳನ್ನು ಅನುಸರಿಸುತ್ತಿದ್ದಾರೆ.