ರಾ.ಸೇ.ಯೋ. ಸ್ವಯಂಸೇವಕರಿಂದ ಮಾಸ್ಕ್ ಹಸ್ತಾಂತರ
ಉಡುಪಿ, ಆ.25: ಸ್ಥಳೀಯ ಪೂರ್ಣಪ್ರಜ್ಞ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ತಯಾರಿಸಿದ ಮಾಸ್ಕನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರಿಗೆ ಇತ್ತೀಚೆಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಆಶೀರ್ವಚಿಸಿದ ಅದಮಾರು ಮಠ ಶಿಕ್ಷಣ ಮಂಡಳಿಯ ಅಧ್ಯಕ್ಷ ಶ್ರೀವಿಶ್ವಪ್ರಿಯತೀರ್ಥರು ಮಾತನಾಡಿ, ಜಗತ್ತನ್ನೆ ಕಂಗೆಡಿಸಿದ ಕೊರೊನಾ ರೋಗ ನಿರ್ಮೂಲನಕ್ಕೆ ಸರ್ವರ ಸಹಕಾರ ಅಗತ್ಯವಿದೆ. ಸರಕಾರದೊಂದಿಗೆ ಸಮಾಜದ ಎಲ್ಲರೂ ಸಹಕರಿಸಿ ದಾಗ ಈ ಕಾರ್ಯದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ ಎಂದರು.
ಕಾಲೇಜಿನ ವಿದ್ಯಾರ್ಥಿಗಳು ತಯಾರಿಸಿದ ಮಾಸ್ಕನ್ನು ಸ್ವೀಕರಿಸಿ ಮಾತನಾಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ, ಕೊರೋನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಸಾಕಷ್ಟು ಶ್ರಮಿಸುತ್ತಿದೆ. ಜನರೂ ಪರಿಸ್ಥಿತಿಯನ್ನು ಅರಿತು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. ಪ್ರತಿಯೊಬ್ಬರೂ ತಮ್ಮ ಗಂಟಲದ್ರವ ಪರೀಕ್ಷೆಗೆ ತಾವಾಗಿಯೇ ಮುಂದೆ ಬಂದಲ್ಲಿ ರೋಗ ಹರಡುವುದನ್ನು ಶೀಘ್ರವಾಗಿ ತಡೆಯಬಹುದು ಎಂದರು.
ಕಾಲೇಜಿನ ವಿದ್ಯಾರ್ಥಿಗಳು ತಯಾರಿಸಿದ ಮಾಸ್ಕನ್ನು ಸ್ವೀಕರಿಸಿ ಮಾತನಾಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ, ಕೊರೋನ ನಿಯಂತ್ರಣಕ್ಕೆ ಜಿಲ್ಲಾಡಳಿತ ಸಾಕಷ್ಟು ಶ್ರಮಿಸುತ್ತಿದೆ. ಜನರೂ ಪರಿಸ್ಥಿತಿಯನ್ನು ಅರಿತು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. ಪ್ರತಿಯೊಬ್ಬರೂ ತಮ್ಮ ಗಂಟಲದ್ರವ ಪರೀಕ್ಷೆಗೆ ತಾವಾಗಿಯೇ ಮುಂದೆ ಬಂದಲ್ಲಿ ರೋಗ ಹರಡುವುದನ್ನು ಶೀಘ್ರವಾಗಿ ತಡೆಯಬಹುದು ಎಂದರು. ಕಾಲೇಜಿನ ಪ್ರಾಂಶುಪಾಲ ಡಾ. ರಾಘವೇಂದ್ರ ಎ. ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಘಟಕ ರಾ.ಸೇ.ಯೋ ಅಧಿಕಾರಿ ಚೈತ್ರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಸಂದೀಪ್ ವಂದಿಸಿದರು.