×
Ad

ಬಿಬಿಎಂಪಿ: ಮತದಾರ ಪಟ್ಟಿ ಸಿದ್ಧತೆಗೆ ಪರಿಷ್ಕೃತ ವೇಳಾಪಟ್ಟಿ ರಚನೆ

Update: 2020-08-25 20:25 IST

ಬೆಂಗಳೂರು, ಆ.25: ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ 2021 ರ ಜ.15 ಕ್ಕೆ ಮತದಾರರ ಅಂತಿಮ ಪಟ್ಟಿ ಸಿದ್ಧಗೊಳಿಸಲು ಪರಿಷ್ಕೃತ ವೇಳಾಪಟ್ಟಿಯನ್ನು ಬಿಬಿಎಂಪಿ ರೂಪಿಸಿಕೊಂಡಿದೆ.

ಅ.31ರ ಒಳಗಾಗಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪೂರ್ಣಗೊಳಿಸಲಾಗುವುದು. ನ.1 ರಿಂದ ನ.15 ರೊಳಗೆ ಪೂರಕ ಮತ್ತು ಸಮಗ್ರ ಕರಡು ಮತದಾರರ ಪಟ್ಟಿ ಸಿದ್ಧಪಡಿಸಲಾಗುವುದು. ನ.15 ರೊಳಗೆ ಪೂರಕ ಹಾಗೂ ಸಮಗ್ರ ಕರಡು ಮತದಾರರ ಪಟ್ಟಿ ಸಿದ್ಧಪಡಿಸಲಾಗುವುದು.

ನ.16 ಕ್ಕೆ ಸಮಗ್ರ ಕರಡು ಮತದಾರರ ಪಟ್ಟಿ ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗುವುದು. ಜ.5 ರೊಳಗಾಗಿ ಆಕ್ಷೇಪಣೆಗಳ ವಿಲೇವಾರಿ ಪ್ರಕ್ರಿಯೆ ಪೂರ್ಣಗೊಳಿಸಿ, ಮತದಾರರ ಪಟ್ಟಿ ಮಾನದಂಡಗಳಿಗೆ ಅನುಗುಣವಾಗಿ ಜ.15 ರಂದು ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಬಿಬಿಎಂಪಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News