×
Ad

ಬೆಂಗರೆಯಲ್ಲಿ ಡಿವೈಎಫ್‌ಐ ಧರಣಿ

Update: 2020-08-25 20:26 IST

 ಮಂಗಳೂರು, ಆ.25: ಸರಕಾರಿ ಆಸ್ಪತ್ರೆಯನ್ನು ಬಲಪಡಿಸಲು ಮತ್ತು ಖಾಸಗಿ ಆಸ್ಪತ್ರೆಯನ್ನು ನಿಯಂತ್ರಿಸಲು ಹಾಗೂ ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿ, ಕೊರೋನಾ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ಲೂಟಿ ದಂಧೆಯನ್ನು ಖಂಡಿಸಿ, ಎಲ್ಲರಿಗೂ ಸಮಾನ ಗುಣಮಟ್ಟದ ಉಚಿತ ಚಿಕಿತ್ಸೆಗಾಗಿ ಒತ್ತಾಯಿಸಿ ಬೆಂಗರೆಯ ಆರೋಗ್ಯ ಕೇಂದ್ರದ ಎದುರು ಡಿವೈಎಫ್‌ಐ ಕಾರ್ಯಕರ್ತರು ಮಂಗಳ ವಾರ ಧರಣಿ ನಡೆಸಿದರು.

ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ ಕೊರೋನದ ವಿರುದ್ಧ ಸರಕಾರಗಳು ಕೈಗೊಂಡ ಪರಿಹಾರ ಕ್ರಮಗಳೆಲ್ಲಾ ವಿಫಲಗೊಂಡಿದೆ. ಅಲ್ಲದೆ ಕೊರೋನ-ಲಾಕ್‌ಡೌನ್ ಸಂದರ್ಭ ಕೇಂದ್ರ ಸರಕಾರ ಹಲವು ಕಾಯ್ದೆಗಳನ್ನು ತಿದ್ದುಪಡಿ ಮಾಡಿ ಅನ್ಯಾಯ ಎಸಗಿದೆ. ರಾಜ್ಯ ಸರಕಾರವೂ ಕೊರೋನಕ್ಕೆ ಸಂಬಂಧಿಸಿದಂತೆ ಮಾಸ್ಕ್, ವೆಂಟಿಲೇಟರ್ ಇನ್ನಿತರ ಸಾಮಾಗ್ರಿಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆಸಿದೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದುಬಾರಿ ದರ ವಸೂಲಿ ಮಾಡಲು ಅವಕಾಶ ಮಾಡಿಕೊಟ್ಟಿದೆ ಎಂದರು ಆರೋಪಿಸಿದರು.

ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್, ಸುನೀಲ್ ತೇವುಲ, ನೌಶಾದ್ ಬೆಂಗರೆ, ಡಿವೈಎಫ್‌ಐ ಬೆಂಗರೆ ಗ್ರಾಮ ಸಮಿತಿಯ ಅಧ್ಯಕ್ಷ ಹನೀಫ್ ಬೆಂಗರೆ, ಕಾರ್ಯದರ್ಶಿ ರಿಝ್ವಾನ್ ಬಿಲಾಲ್, ನಾಸಿರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News