ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣ ಬಿಮ್ಸ್ ಗೆ ಸಮರ್ಪಿಸಿದ ಬಿಎಸ್‍ವೈ

Update: 2020-08-25 15:51 GMT

ಬೆಳಗಾವಿ, ಆ.25: ಕೊರೋನ ಸೋಂಕು ಪೀಡಿತರಿಗೆ ವೆಂಟಿಲೇಟರ್ ಬದಲಾಗಿ ಸುಲಭ ಚಿಕಿತ್ಸೆ ನೀಡಬಹುದಾದ ನಾಲ್ಕು ಹೈ ಫ್ಲೋ ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಸಮರ್ಪಿಸಿದರು.

ರಾಜ್ಯದಲ್ಲಿ ಮೊದಲ ಬಾರಿ ಶಾಸಕ ಅಭಯ ಪಾಟೀಲ ಅವರು ಈ ಉಪಕರಣಗಳಿಗೆ ಅನುದಾನ ನೀಡಿದ್ದಾರೆ. ಇದೇ ರೀತಿ ಉಳಿದ ಕ್ಷೇತ್ರದ ಶಾಸಕರೂ ಈ ರೀತಿಯ ಹೈ ಫ್ಲೋ ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣಗಳನ್ನು ನೀಡಬೇಕೆಂದು ಸಿಎಂ ಸಲಹೆ ನೀಡಿದರು. ಇದಕ್ಕೆ ಸಂಬಂಧಿಸಿದಂತೆ ಸುತ್ತೋಲೆ ಕೂಡ ಹೊರಡಿಸಲಾಗುತ್ತದೆ ಎಂದರು. ಶಾಸಕ ಅಭಯ ಪಾಟೀಲ್ ಅವರು ಬೆಳಗಾವಿ ನಗರದ ದಕ್ಷಿಣ ಮತ ಕ್ಷೇತ್ರದ ಶಾಸಕರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News