ದ.ಕ., ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ : ಶಾಹೀನ್ ಕಾಲೇಜು ಬೀದರ್
ಮಂಗಳೂರು : ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ. 95 ಮತ್ತು ಹೆಚ್ಚಿನ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ಶಾಹೀನ್ ಕಾಲೇಜು, ಬೀದರ್ ತೀರ್ಮಾನಿಸಿದೆ.
ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ನಮ್ಮ ಕಾಲೇಜು ಇಲ್ಲದಿರುವ ಕಾರಣ ಈ ಭಾಗದ ವಿದ್ಯಾರ್ಥಿಗಳಿಗೆ ಬೀದರ್ ಬ್ರ್ಯಾಂಚ್ ನಲ್ಲಿ ಸಂಪೂರ್ಣ ಉಚಿತ ಶಿಕ್ಷಣ ನೀಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷರಾದ ಡಾ. ಅಬ್ದುಲ್ ಖದೀರ್ ತಿಳಿಸಿದ್ದಾರೆ.
ಕಳೆದ ವರ್ಷ ನೀಟ್ ಪರೀಕ್ಷೆಯಲ್ಲಿ 327 ಸರಕಾರಿ ಕೋಟಾದ ವೈದ್ಯಕೀಯ ಸೀಟುಗಳನ್ನು ಶಾಹೀನ್ ಕಾಲೇಜು, ಬೀದರ್ ಪಡೆದುಕೊಂಡಿದೆ. ದೇಶದ ಒಟ್ಟು ಸರಕಾರಿ ಕೋಟಾದ ವೈದ್ಯಕೀಯ ಸೀಟುಗಳಲ್ಲಿ ಶೇ. 0.6 ಸೀಟುಗಳನ್ನು ಈಗಾಗಲೇ ನಾವು ಪಡೆಯುತ್ತಿದ್ದು, ಇನ್ನೈದು ವರ್ಷಗಳಲ್ಲಿ ದೇಶದ ಒಟ್ಟು ಸರಕಾರಿ ವೈದ್ಯಕೀಯ ಸೀಟುಗಳ ಶೇ. 1 ರಷ್ಟು ಸೀಟು ಪಡೆಯುವಲ್ಲಿ ನಾವು ಯಶಸ್ವಿಯಾಗಲಿದ್ದೇವೆ ಎಂದು ಅವರು ತಿಳಿಸಿದರು.
ಈ ಭಾರಿ ಕೆ-ಸೆಟ್ ನಲ್ಲಿ ಕೂಡ ಟಾಪ್ 50 ರ್ಯಾಂಕ್ ಗಳಲ್ಲಿ ಐದು ಶ್ರೇಣಿಗಳನ್ನು ನಾವು ಪಡೆದುಕೊಂಡಿದ್ದೇವೆ. ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗದಲ್ಲಿ ಕೂಡಾ ಉಚಿತ ಶಿಕ್ಷಣ ನೀಡಲಿದ್ದೇವೆ. ವಾಣಿಜ್ಯ ಮತ್ತು ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ. ಮತ್ತು ಯು.ಪಿ.ಎ.ಎಸ್ಸಿ. ಪರೀಕ್ಷೆಗಳಿಗೆ ಇಂಟಿಗ್ರೇಟೆಡ್ ತರಬೇತಿ ನೀಡಲಿದ್ದೇವೆ ಎಂದು ಅವರು ತಿಳಿಸಿದರು.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊ.ಸಂಖ್ಯೆ 8197077682 ಸಂಪರ್ಕಿಸಬಹುದು.