ಡಾ. ಶಿಮಂತೂರು ನಾರಾಯಣ ಶೆಟ್ಟಿ ನಿಧನ
Update: 2020-08-26 16:39 IST
ಉಡುಪಿ : ‘ಯಕ್ಷ ಛಂದೋಂಬುಧಿ’ಯ ಗ್ರಂಥ ಕರ್ತ, ಯಕ್ಷಗಾನದ ಛಂದಸ್ಸಿನ ಬಗ್ಗೆ ಆಳವಾದ ಜ್ಞಾನ ಹೊಂದಿದ, ‘ಯಕ್ಷಗಾನ ನಾಗವರ್ಮ’ ಎಂದು ಖ್ಯಾತಿ ಹೊಂದಿರುವ, ನಿವೃತ್ತ ಶಿಕ್ಷಕ, ಪಾರ್ಥಿಸುಬ್ಬ ಪ್ರಶಸ್ತಿ ಪುರಸ್ಕೃತ ಹಾಗು ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿದ್ದ ಶಿಮಂತೂರು ನಾರಾಯಣ ಶೆಟ್ಟಿ (87) ಇಂದು ಬೆಳಗ್ಗೆ ಸ್ವಗೃಹದಲ್ಲಿ ನಿಧನ ಹೊಂದಿದರು.
ಸಂಸ್ಥೆಯ ವತಿಯಿಂದ ಇವರಿಗೆ ಯಕ್ಷಗಾನ ಕ್ಷೇತ್ರದ ವಿಶಿಷ್ಠ ಸಾಧಕರಿಗೆ ನೀಡುವ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿಯನ್ನು 2013ರಲ್ಲಿ ನೀಡಿ ಗೌರವಿಸಲಾಗಿತ್ತು.
ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಗಣೇಶ ಕೊಲೆಕಾಡಿ ಸೇರಿ ನೂರಾರು ಶಿಷ್ಯರನ್ನು ಕಲಾ ಕ್ಷೇತ್ರಕ್ಕೆ ನೀಡಿದ ಹಿರಿಮೆ ಇವರದ್ದು. ಹಲವಾರು ಪ್ರಸಂಗಗಳನ್ನು ರಚಿಸಿದ್ದಾರೆ. ಯಕ್ಷಗಾನ ಕಲಾರಂಗದ ಅಧ್ಯಕ್ಷ ಕೆ. ಗಣೇಶ್ ರಾವ್ ಕಾರ್ಯದರ್ಶಿ ಮುರಲಿ ಕಡೆಕಾರ್ ಸಂಸ್ಥೆಯ ವತಿಯಿಂದ ಸಂತಾಪ ಸೂಚಿಸಿದ್ದಾರೆ.