ಪ್ರಚೋದನಕಾರಿ ಪೋಸ್ಟ್ ಪ್ರಕರಣ: ಆರೋಪಿ ನವೀನ್ ಜಾಮೀನು ಅರ್ಜಿ ವಜಾ

Update: 2020-08-26 13:26 GMT

ಬೆಂಗಳೂರು, ಆ.26: ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಹಿಂಸಾಚಾರಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿರುವ ಪ್ರಚೋದನಕಾರಿ ಪೋಸ್ಟ್ ಹಾಕಿದ ಪ್ರಕರಣದ ಆರೋಪಿ ಹಾಗೂ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸಂಬಂಧಿ ನವೀನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನಗರದ 1ನೆ ಎಸಿಎಂಎಂ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ.

ಆ.11ರಂದು ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ನಡೆದ ಹಿಂಸಾಚಾರಕ್ಕೆ ಕಾರಣ ಎನ್ನಲಾಗುತ್ತಿರುವ, ಪ್ರಚೋದನಕಾರಿ ಫೇಸ್‍ಬುಕ್‍ ಪೋಸ್ಟ್ ಮಾಡಿರುವ ಆರೋಪ ನವೀನ್ ಮೇಲಿದ್ದು, ಸದ್ಯ ನವೀನ್ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News