ನೀಟ್ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ

Update: 2020-08-26 16:15 GMT

ಹೊಸದಿಲ್ಲಿ, ಆ.26: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ಬರೆಯಲಿರುವ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆಗೊಳಿಸಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಮಂಡಳಿ(ಎನ್‌ಟಿಎ) ತಿಳಿಸಿದೆ. ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಎನ್‌ಟಿಎಎನ್‌ಇಇಟಿ.ಎನ್‌ಐಸಿ.ಇನ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. 2020 ಸೆಪ್ಟೆಂಬರ್ 13ರಂದು ನಡೆಯಲಿರುವ ಪ್ರವೇಶ ಪರೀಕ್ಷೆಯ ಬಗ್ಗೆ ಅಗತ್ಯದ ಮಾಹಿತಿಗಳನ್ನು ಪ್ರವೇಶ ಪತ್ರದಲ್ಲಿ ನೀಡಲಾಗಿದೆ. ಪ್ರವೇಶ ಪತ್ರದ ಪ್ರತಿಯನ್ನು ಹೊಂದಿರದ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ ಎಂದು ಎನ್‌ಟಿಎ ಸ್ಪಷ್ಟಪಡಿಸಿದೆ. ಕೊರೋನ ಸೋಂಕಿನಿಂದಾಗಿ ನೀಟ್ ಪರೀಕ್ಷೆಯನ್ನು ಹಲವು ಬಾರಿ ಮುಂದೂಡಲಾಗಿದ್ದು ಇದೀಗ ಸೆಪ್ಟೆಂಬರ್ 13ಕ್ಕೆ ನಿಗದಿಗೊಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News