ಲಾಕ್ ಡೌನ್ ನಿಂದಾದ ಜಿಎಸ್‌ಟಿ ಆದಾಯ ನಷ್ಟಕ್ಕೆ ಕೇಂದ್ರ ಸರಕಾರ ರಾಜ್ಯಗಳಿಗೆ ಪರಿಹಾರ ನೀಡಲೇಬೇಕು

Update: 2020-08-26 16:44 GMT

ಹೊಸದಿಲ್ಲಿ, ಆ. 26: ಕೊರೋನ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಜಾರಿಗೊಳಿಸಲಾದ ಲಾಕ್‌ ಡೌನ್ ಸಂದರ್ಭ ಆಗಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಆದಾಯ ನಷ್ಟಕ್ಕೆ ಕೇಂದ್ರ ಸರಕಾರ ರಾಜ್ಯ ಸರಕಾರಗಳಿಗೆ ಪರಿಹಾರ ನೀಡಲೇಬೇಕು ಎಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಕೇಂದ್ರ ಸರಕಾರಕ್ಕೆ ತಿಳಿಸಿದ್ದಾರೆ.

ದೇಶದಲ್ಲಿ ಕೊರೋನ ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನೆಲೆಯಲ್ಲಿ ಉಂಟಾದ ಜಿಎಸ್‌ಟಿ ಆದಾಯ ನಷ್ಟಕ್ಕೆ ಪರಿಹಾರ ನೀಡಬೇಕು ಎಂಬ ರಾಜ್ಯ ಸರಕಾರದ ಬೇಡಿಕೆಯ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅವರ ಸಲಹೆ ಕೇಳಿತ್ತು. ಈ ಹಿನ್ನೆಲೆಯಲ್ಲಿ ಅವರು ಈ ಸಲಹೆ ನೀಡಿದ್ದಾರೆ. ಹಣಕಾಸಿನ ಕೊರತೆಯಿದ್ದರೂ ಕೇಂದ್ರ ಸರಕಾರ ರಾಜ್ಯಗಳಿಗೆ ಸಂಪೂರ್ಣ ಹಣ ಪಾವತಿಸಬೇಕು ಎಂದವರು ಹೇಳಿದ್ದಾರೆ.

ಕೊರೊನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸರಕಾರದ ಆದಾಯಕ್ಕೂ ಹೊಡೆತ ಬಿದ್ದಿದೆ. ಈ ನಡುವೆ ರಾಜ್ಯಗಳು, ಪ್ರಮುಖವಾಗಿ ವಿಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳು , ಲಾಕ್ ಡೌನ್ ಸಂದರ್ಭದಲ್ಲಿ ತಮ್ಮ ಆದಾಯಕ್ಕೆ ತೀವ್ರ ಹೊಡೆತ ಬಿದ್ದಿದ್ದು, ಪರಿಹಾರ ನೀಡಲೇಬೇಕು ಎಂದು ಒತ್ತಾಯಿಸಿತ್ತು. ಆದರೆ ಈ ಪಟ್ಟಿಯಲ್ಲಿ ವಿಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳು ಮಾತ್ರ ಇರುವುದಲ್ಲ. ಇತ್ತೀಚೆಗಷ್ಟೇ ಮಾತನಾಡಿದ್ದ ಬಿಹಾರ ಉಪಮುಖ್ಯಮಂತ್ರಿ ಸುಶಿಲ್ ಕುಮಾರ್ ಮೋದಿ , ಕೇಂದ್ರವು ರಾಜ್ಯಗಳಿಗೆ ಜಿಎಸ್ ಟಿ ಪರಿಹಾರವನ್ನು ನೀಡಲೇಬೇಕು ಎಂದಿದ್ದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News