×
Ad

ಬೆಂಗಳೂರು: ಕೊರೋನ ಸೋಂಕಿಗೆ ಇಂದು 31 ಮಂದಿ ಮೃತ್ಯು

Update: 2020-08-26 22:19 IST

ಬೆಂಗಳೂರು, ಆ.26: ನಗರದಲ್ಲಿ ಬುಧವಾರ ಒಂದೇ ದಿನ 3,284 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿಗೆ 31 ಜನರು ಮೃತರಾಗಿದ್ದಾರೆ.

ನಗರದಲ್ಲಿ ಒಟ್ಟು 1,15,371 ಸೋಂಕಿತರು ದೃಢಪಟ್ಟಿದ್ದು, ಇಲ್ಲಿಯವರೆಗೆ ನಗರದಲ್ಲಿ 1,786 ಜನರು ಸೋಂಕಿಗೆ ಬಲಿಯಾಗಿದ್ದಾರೆ. 77,531 ಜನರು ಇಲ್ಲಿಯವರೆಗೆ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇನ್ನು ಬುಧವಾರ 2630 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 36,053 ಜನ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿರುವ 31 ಜ್ವರ ಚಿಕಿತ್ಸಾಲಯದಲ್ಲಿ ಒಟ್ಟು 1,53,296 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.

ಮಂಗಳವಾರದ ಬಿಬಿಎಂಪಿ ಕೋವಿಡ್ ವರದಿಯಲ್ಲಿ ನಗರದಲ್ಲಿ ಒಟ್ಟು ಸಕ್ರಿಯ 15,723 ಕಂಟೈನ್ಮೆಂಟ್ ಝೋನ್‍ಗಳಿವೆ. ಇದುವರೆಗೂ 40,563 ಕಂಟೈನ್ಮೆಂಟ್ ಝೋನ್‍ಗಳನ್ನು ಗುರುತಿಸಲಾಗಿದೆ.

ಕೊರೋನಕ್ಕೆ ನವಜಾತು ಶಿಶು ಬಲಿ

ಕೊರೋನ ಸೋಂಕು ತಗುಲಿ ನವಜಾತ ಶಿಶು ಮರಣವನ್ನಪ್ಪಿರುವ ಘಟನೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ.

ದೊಡ್ಡಬಳ್ಳಾಪುರ ಮೂಲದ ದಂಪತಿಯ ಮಗು ಹುಟ್ಟಿದ ಮೂರ್ನಾಲ್ಕು ಘಂಟೆಯಲ್ಲಿ ಕೊರೋನ ಸೋಂಕಿನಿಂದ ಮೃತಪಟ್ಟಿದೆ. ತಾಯಿಗೆ ಕೊರೋನ ತಗಲಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತ ಮಗುವನ್ನು ಪಡೆಯಲು ಮಗುವಿನ ತಂದೆ ಆಸ್ಪತ್ರೆಗೆ ಬಂದಿಲ್ಲ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಮಗುವಿನ ಅಂತ್ಯ ಸಂಸ್ಕಾರವನ್ನು ಶಾಸಕ ಝಮೀರ್ ಅಹ್ಮದ್ ತಂಡದ ಸಹಕಾರದೊಂದಿಗೆ ಆಂಬ್ಯುಲೆನ್ಸ್ ಸಿಬ್ಬಂದಿ ನಗರದ ಹಿಂದೂ ರುದ್ರಭೂಮಿಯಲ್ಲಿ ಹಿಂದೂ ಸಂಪ್ರದಾಯದಂತೆ ನೆರವೇರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News