ಮೂರು ಬಾರಿ ಮುಂದೂಡಲ್ಪಟ್ಟಿದ್ದ ಕೆ-ಸೆಟ್ ಪರೀಕ್ಷೆಗೆ ಅನುಮತಿ

Update: 2020-08-26 18:05 GMT

ಬೆಂಗಳೂರು, ಆ.26: ಕೋವಿಡ್‍ನಿಂದ ಮೂರು ಬಾರಿ ಮುಂದೂಡಲ್ಪಟ್ಟಿದ್ದ ಮೈಸೂರು ವಿಶ್ವವಿದ್ಯಾಲಯ ನಡೆಸುವ ಕೆ-ಸೆಟ್ ಪರೀಕ್ಷೆಯನ್ನು ಸೆ. 20 ರಂದು ನಡೆಸಲು ರಾಜ್ಯ ಸರಕಾರ ಅನುಮತಿ ನೀಡಿದೆ.

ಮೈಸೂರು ವಿಶ್ವವಿದ್ಯಾನಿಲಯ ನಡೆಸುವ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯು ಕೋವಿಡ್‍ನಿಂದ ಮೂರು ಬಾರಿ ಮುಂದೂಡಲ್ಪಟ್ಟಿತ್ತು. ಈ ಬಗ್ಗೆ ಮೈಸೂರು ವಿಶ್ವವಿದ್ಯಾನಿಲಯವು ಹೊಸ ದಿನಾಂಕವನ್ನು ನಿಗದಿಪಡಿಸುವಂತೆ ಸರಕಾರಕ್ಕೆ ಎರಡು ಪತ್ರವನ್ನು ಬರೆದಿತ್ತು. ಈ ಹಿನ್ನೆಲೆಯಲ್ಲಿ ಸರಕಾರ ಅನುಮತಿ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News