×
Ad

ಕೊರೋನ ಸೋಂಕಿತ ಗರ್ಭಿಣಿ ಸಾವು; ವೈದ್ಯರ ನಿರ್ಲಕ್ಷ್ಯ ಎಂದ ಪೋಷಕರು

Update: 2020-08-26 23:41 IST

ಮಂಡ್ಯ, ಆ.26: ಕೊರೋನ ಸೋಂಕಿಗೆ ಒಳಗಾಗಿದ್ದ ಶ್ರೀರಂಗಪಟ್ಟಣ ತಾಲೂಕು ಚನ್ನೇನಹಳ್ಳಿ ಗ್ರಾಮದ ಗರ್ಭಿಣಿ ವೀಣಾ(27) ಮೃತಪಟ್ಟಿದ್ದು, ಅಧಿಕಾರಿಗಳ ನಿರ್ಲಕ್ಷ್ಯ ಕಾರಣವೆಂದು ಪೋಷಕರು ಆರೋಪಿಸಿದ್ದಾರೆ.

ಹೊಟ್ಟೆನೋವು ಕಾಣಿಸಿಕೊಂಡಿದ್ದ ವೀಣಾ ಆ.18ರಂದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರ ಸಲಹೆಯಂತೆ ಆ.20ರಂದು ಕ್ಯಾತುಂಗೆರೆ ಸರಕಾರಿ ಆಸ್ಪತ್ರೆಯಲ್ಲಿ ಕೊರೋನ ತಪಾಸಣೆ ಮಾಡಿಸಲಾಗಿತ್ತು. ಆ.21ರಂದು ವರದಿಯಲ್ಲಿ ಪಾಸಿಟಿವ್ ಬಂದಿತ್ತು ಎನ್ನಲಾಗಿದೆ.

ಮಂಗಳವಾರ ತಡರಾತ್ರಿ ಉಸಿರಾಟದ ತೊಂದರೆಯಿಂದ ಅವರು ಮೃತಪಟ್ಟಿದ್ದು, ಆ.21ರಂದು ವರದಿಯಲ್ಲಿ ಪಾಸಿಟಿವ್ ಬಂದರೂ ಆಸ್ಪತ್ರೆಗೆ ದಾಖಲು ಮಾಡಿಕೊಳ್ಳದೆ ವೈದ್ಯರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News